nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    ಕೊರಟಗೆರೆ June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    By adminJune 25, 2026No Comments1 Min Read

    Provided by
    Provided by

    ಕೊರಟಗೆರೆ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್‌ ಐ ತೀರ್ಥೇಶ್ ತಿಳಿಸಿದರು.

    ಪಟ್ಟಣದ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಅಂತರರಾಷ್ಟ್ರೀಯ ದಿನ’ದ ಅಂಗವಾಗಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ “ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಜಾಗೃತಿ ಅಭಿಯಾನ”ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಯುವ ಜನತೆಯನ್ನು ಗುರಿಯಾಗಿಸಿಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವಿಧ ರೂಪದಲ್ಲಿ ಮಾದಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಮುಂದಾಗಿರುವುದು ದುರದೃಷ್ಟಕರ ಸಂಗತಿ ಎಂದ ಅವರು, ಮಾದಕ ವಸ್ತುಗಳ ಸಾಗಣೆ, ಸಂಗ್ರಹಣೆ ಹಾಗೂ ಜಮೀನುಗಳಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಬೆಳೆಯುವ ಪ್ರಕರಣಗಳನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಎಚ್ಚರಿಸಿದರು. ಇಂತಹ ಯಾವುದೇ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅವರು ಕರೆ ನೀಡಿದರು.

    ಡ್ರಗ್ಸ್ ನಿಗ್ರಹದಲ್ಲಿ ಸಮುದಾಯದ ಪಾತ್ರ ದೊಡ್ಡದಿದೆ. ಪೋಷಕರು ತಮ್ಮ ಮಕ್ಕಳ ನಡವಳಿಕೆಗಳ ಮೇಲೆ ನಿರಂತರ ನಿಗಾ ಇಡಬೇಕು ಹಾಗೂ ಅವರೊಂದಿಗೆ ಉತ್ತಮ ಸಂವಹನ ಇಟ್ಟುಕೊಳ್ಳಬೇಕು. ಸಮುದಾಯದ ಮಟ್ಟದಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕಾಗಿದೆ.

    — ತೀರ್ಥೇಶ್, ಪಿಎಸ್‌ ಐ ಕೊರಟಗೆರೆ

    ಈ ಜಾಗೃತಿ ಜಾಥಾದಲ್ಲಿ ಸರ್ಕಾರಿ ಕಿರಿಯ ಕಾಲೇಜಿನ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾವು, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಕುರಿತು ಸಾರ್ವಜನಿಕರಲ್ಲಿ ಯಶಸ್ವಿಯಾಗಿ ಅರಿವು ಮೂಡಿಸಿತು.


    Provided by
    Provided by

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.