ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಿಕೊಳ್ಳಬೇಕಿದೆ ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದರು.
ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಇತ್ತೀಚಿಗೆ ಏರ್ಪಡಿಸಲಾಗಿದ್ದ ಪೋಲಿಯೋ ದಿನದ ವಿಶೇಷ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯ ಸರಕಾರದ ಆದೇಶದಂತೆ ಹುಟ್ಟಿದ ದಿನದ ಮಗುವಿನಿಂದ ಹಿಡಿದು ಜೂ.28 ರಿಂದ ಜು.1ರ ತನಕ ಗ್ರಾಮೀಣದಲ್ಲಿ 142 ಕೇಂದ್ರ ಮತ್ತು ಪಟ್ಟಣದ 15 ವಾರ್ಡಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಉಳಿದಂತೆ ಸಾರ್ವಜನಿಕ ಪ್ರದೇಶಗಳಾದ ಬಸ್‌ನಿಲ್ದಾಣ, ಗೊರವನಹಳ್ಳಿ ದೇವಾಲಯ, ಹೋಬಳಿ ಕೇಂದ್ರಗಳಲ್ಲಿಯೂ ಸಹ ಲಸಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮಕ್ಕಳ ಭವಿಷ್ಯಕ್ಕಾಗಿ ಲಸಿಕೆಯಿಂದ ಯಾರು ಸಹ ವಂಚಿತರಾಗದೇ ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕಿದೆ. ಇದಾದ ನಂತರವು ಸಹ ಎರಡು ದಿನಗಳ ಕಾಲ ಮನೆಮನೆಗೆ ಲಸಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.
ವಿಶೇಷ ಸಭೆಯಲ್ಲಿ ತಾಪಂ ಇಓ ಅಪೂರ್ವ, ತಾಲೂಕು ಆರೋಗ್ಯಾಧಿಕಾರಿ ಡಾ.ಜ್ಯೋತಿ ರೆಡ್ಡಿ, ಪಪಂ ಸಿಇಓ ಉಮೇಶ್, ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




