nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    ಜಿಲ್ಲಾ ಸುದ್ದಿ June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    By adminJune 26, 2026No Comments2 Mins Read
    suresh babu.jpg

    ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಉತ್ತಮವಾದ ಜಾಗದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣವನ್ನು ಮೀಸಲಾಗಿಟ್ಟಿದ್ದು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.

    ಪಟ್ಟಣದ ತೇರಂಶ್ರೀ ಭವನದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ದಲಿತ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು, ಭವನ ನಿರ್ಮಿಸುವ ಜಾಗದಲ್ಲಿದ್ದ ಮರಗಳ ತೆರವು ಕಾರ್ಯವೂ ನಡೆಯುತ್ತಿದೆ ಎಂದರು.

    ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಪಡೆದು ಉತ್ತಮ ರೀತಿಯ ಎರಡು ಅಂತಸ್ತಿನ ಭವನವನ್ನು ನಿರ್ಮಿಸಲಾಗುವುದು ಎಂದರು. ಭವನ ನಿರ್ಮಾಣವಾದ ನಂತರ ಬಾಬುಜಗಜೀವನರಾಂರವರ ಪುತ್ತಳಿಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ತಹಶೀಲ್ದಾರ್ ಮಮತಾ ಎಂ ಮಾತನಾಡಿ, ಪುರಸಭೆಯ ಮುಖ್ಯಾಧಿಕಾರಿಯು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಕೆಲವು ಸಮಸ್ಯೆಗಳನ್ನು ಬಗೆಹರಿಸಿಲ್ಲವೆಂದು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದು ಮುಂದಿನ ದಿನಗಳಲ್ಲಿ ಇನ್ನೊಂದು ಸಭೆ ಕರೆಯಲಾಗುವುದು ಎಂದರು.

    ರಾಜ್ಯ ಮಾದಿಗ ದಂಡೋರದ ರಾಜ್ಯ ಪ್ರಧಾನ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ಮಾತನಾಡಿ, ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಮ್ಮ ಎಸ್.ಸಿ ಎಸ್.ಟಿ ಯ ಹಣವನ್ನು ಖರ್ಚು ಮಾಡಿರುವ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ನಿವೇಶನ ರಹಿತರಿಗೆ ಸರಿಯಾದ ರೀತಿಯಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.
    ಇದಕ್ಕೆ ಧ್ವನಿಗೂಡಿಸಿದ ಮುಖಂಡ ಗೋವಿಂದರಾಜು, ಸರ್ಕಾರದ ಅನುದಾನ ಬರದಿದ್ದರೂ ಸ್ಥಳೀಯವಾಗಿ ಬರುವಂತಹ ಪಂಚಾಯಿತಿಯ ಆದಾಯದಲ್ಲಿ ನಮ್ಮ ಎಸ್.ಸಿ ಎಸ್.ಟಿ ಭಾಗವನ್ನು ಸರಿಯಾಗಿ ನೀಡಬೇಕು ಎಂದರು.

    ದಲಿತ ಮುಖಂಡ ಮಲ್ಲಿಕಾರ್ಜುನ್ ಮಾತನಾಡಿ, ಸಭೆ ನಡೆದು ಒಂಬತ್ತು ತಿಂಗಳು ಕಳೆದರೂ ನಮ್ಮ ಕುಂದು ಕೊರತೆ ಸಭೆ ನಡೆದಿಲ್ಲ ಎಂದು ಆರೋಪಿಸಿದರು.

    ದಲಿತ ಸಂಘರ್ಷ ಸಮಿತಿ ಸಂಚಾಲಕ ಲಿಂಗದೇವರು ಮಾತನಾಡಿ, ಪಟ್ಟಣದ ಹೊರವಲಯದಲ್ಲಿರುವ ಸ್ಮಶಾನದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ಅಂತ್ಯಸಂಸ್ಕಾರವನ್ನು ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಸೂಕ್ತವಾದ ವ್ಯವಸ್ಥೆ ಮಾಡಬೇಕಾಗಿದೆ ಹಾಗೂ ಪುರಸಭೆಯಲ್ಲಿರುವ ಪೌರಕಾರ್ಮಿಕರಿಗೆ ಅವರ ಕೆಲಸಗಳಿಗೆ ಅಗತ್ಯವಾದ ಉಪಕರಣಗಳನ್ನು ನೀಡಬೇಕಾಗಿರುವುದು ಪುರಸಭೆಯ ಜವಾಬ್ದಾರಿಯಾಗಿದೆ ಎಂದ ಅವರು ಪ್ರತಿದಿನ ಬೆಳಗಿನ ಉಪಹಾರವನ್ನು ಕೇವಲ 25 ಜನರು ತಿನ್ನುತ್ತಿದ್ದು ಟಿಫನ್ ಬಿಲ್ಲು 50 ಜನಕ್ಕೆ ಮಾಡಲಾಗಿದೆ. ಅವರು ನೀಡುವ ತಿಂಡಿಯು ಸರಿಯಾದ ರೀತಿಯಲ್ಲಿ ರುಚಿ ಶುಚಿ ಇರುವುದಿಲ್ಲ ಎಂದರು.

    ಸಭೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸಮಸ್ಯೆ, ಬಗರ್ಹುಕುಂ ಸಾಗುವಳಿದಾರರ ಖಾತೆ ಮಾಡುವ ಬಗ್ಗೆ, ಹುಳಿಯಾರಿನಲ್ಲಿ ವಾಲ್ಮೀಕಿ ಭವನ ನಿರ್ಮಿಸುವ ಬಗ್ಗೆ ಚರ್ಚೆಯಾಯಿತು. ಈ ಸಂದರ್ಭದಲ್ಲಿ ಗೌಡಗೆರೆ ಬಳಿಯಲ್ಲಿದ್ದ 20 ಅಲೆಮಾರಿ ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರವನ್ನು ವಿತರಿಸಲಾಯಿತು.

    ಸಭೆಯಲ್ಲಿ ಮಾಜಿ ಜಿ.ಪಂ. ಅಧ್ಯಕ್ಷ ರಘುನಾಥ್, ದಲಿತ ಸಂಘಟನೆಯ ಮುಖಂಡರುಗಳಾದ ಗೋ.ನಿ.ವಸಂತ್ ಕುಮಾರ್, ಗಿರಿಯಪ್ಪ, ಶ್ರೀಧರ್, ಪ್ರವೀಣ್, ಯರೇ ಕಟ್ಟೆ ರಮೇಶ್, ರಾಜು ಬೆಳಗೆಹಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ನಾಯ್ಕ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.