ತುಮಕೂರು: ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಸಂಸ್ಥೆಯು ಬೀಡಿ ಕಾರ್ಮಿಕರು, ಗಣಿ ಕಾರ್ಮಿಕರು, ಸುಣ್ಣದ ಕಲ್ಲು ಹಾಗೂ ಸಿನಿಮಾ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
2026–27ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡು scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು.
1 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ, ಪಿಯು, ಪದವಿ, ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 31ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 91482 40554 ಇವರನ್ನು ಸಂಪರ್ಕಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




