nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    ರಾಜ್ಯ ಸುದ್ದಿ June 26, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    By adminJune 26, 2026No Comments2 Mins Read
    g parameshwar.jpg

    Provided by
    Provided by

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈವರೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದು, ಮಳೆ ಕೊರತೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

    ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.
    ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದರು.

    ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು. ಹಿರಿಯ ಅಧಿಕಾರಿಗಳಾದ ಮನೋಜ್ ಕುಮಾರ್ ಮೀನಾ, ಮುಲ್ಲೈ ಮುಗಿಲನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


    Provided by
    Provided by

    122 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

    122 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 789 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯಲಾಗಿದ್ದು 669 ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.