ತುಮಕೂರು: ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ತುಮಕೂರು ಹಾಗೂ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಪಾವಗಡ ಇವರ ಸಂಯುಕ್ತ ಆಶ್ರಯದಲ್ಲಿ ಜೂ.29 ಸೋಮವಾರ ಬೆಳಿಗ್ಗೆ 10:30ಕ್ಕೆ 3395 ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) ಮತ್ತು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಶ್ರೀ ಪತಂಜಲಿ ಯೋಗ ಮಂದಿರ ಶಾಂತಿನಗರ, ಪಾವಗಡ ಇಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಸದರಿ ಮೇಲ್ಕಂಡ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ದೈಹಿಕ ಸಾಮರ್ಥ್ಯ, ಲಿಖಿತ ಪರೀಕ್ಷೆ, ನಿಗದಿಯಾಗಿರುವ ಪಠ್ಯಕ್ರಮ, ಅಂಕಗಳ ವಿಂಗಡಣೆ, ವಯೋಮಿತಿ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳನ್ನು ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು.
ಪಾವಗಡ ತಾಲ್ಲೂಕಿನ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಮೊ. 9448432930ನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಲು ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ತುಮಕೂರು ಶಾಖೆಯ ಕಾರ್ಯದರ್ಶಿಗಳು ಹಾಗೂ ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ತಿಳಿಸಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




