nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    ಜಿಲ್ಲಾ ಸುದ್ದಿ June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    By adminJune 28, 2026No Comments2 Mins Read
    sargur

    ಸರಗೂರು: ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ ಹಾಗೂ ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರಿಗೂ ಸದಾ ಸ್ಮರಣೀಯ ಮತ್ತು ಆದರ್ಶಪ್ರಾಯ ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಎಚ್.ಎನ್. ಸುದೀರ್ ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಕೆಂಪೇಗೌಡ ಜಯಂತಿ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ನಗರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೆಂಪೇಗೌಡರು ನೀಡಿರುವ ಕೊಡುಗೆಗಳ ಬಗ್ಗೆ ಜನರಲ್ಲಿ, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ಕೆಂಪೇಗೌಡರು ದೂರದೃಷ್ಟಿಯಿಂದ ಎಲ್ಲಾ ಸಮುದಾಯದವರೂ ಸಹಬಾಳ್ವೆಯಿಂದ ಜೀವಿಸುವಂತೆ ಅಂದೇ ವ್ಯವಸ್ಥೆ ಮಾಡಿದ್ದರು ಎಂದು ನೆನೆದರು.

    ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಎಂ.ಎಂ.ಕೆ.ಕಾಲೇಜಿನ ಉಪನ್ಯಾಸಕಿ ಮಹಾದೇವಿ ಮಾತನಾಡಿ, “ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಬೆಂಗಳೂರನ್ನು ವೈಜ್ಞಾನಿಕವಾಗಿ ಕಟ್ಟಿದರು. ಬೆಂಗಳೂರು ಕಟ್ಟಿದ ಕೆಂಪೇಗೌಡ ಹಾಗೂ ಗುಡಿಬಂಡೆ ಕಟ್ಟಿದ ಬೈರೇಗೌಡರ ಆಡಳಿತ ಶೈಲಿಯಲ್ಲಿ ಸಾಕಷ್ಟು ಸಾಮ್ಯತೆಗಳಿವೆ. ಇಬ್ಬರೂ ಜಲಕ್ಷಾಮ ನಿವಾರಣೆಗೆ ಕೆರೆಗಳನ್ನು ನಿರ್ಮಿಸಿದ್ದರು. ಇಂತಹ ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೆ, ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

    ತಹಸೀಲ್ದಾರ್ ಮೋಹನಕುಮಾರಿ ಮಾತನಾಡಿ, “ಸುದೀರ್ಘ ಆಡಳಿತ ನಡೆಸಿ ಇಂದಿನ ಬಹುದೊಡ್ಡ ಸುಸಜ್ಜಿತ ನಗರಕ್ಕೆ ಶಾಶ್ವತ ಭದ್ರಬುನಾದಿ ಹಾಕಿದ ಕೆಂಪೇಗೌಡರ ತ್ಯಾಗ ಮತ್ತು ಶ್ರಮ ಅನನ್ಯವಾದದ್ದು. ಮೂಲಭೂತ ಸೌಕರ್ಯ, ನಗರಾಭಿವೃದ್ಧಿ, ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ಸಮರ್ಥ ಆಡಳಿತ ನೀಡಿದ್ದಾರೆ” ಎಂದು ಶ್ಲಾಘಿಸಿದರು.

    ಇದೇ ಸಂದರ್ಭದಲ್ಲಿ ತಾಲ್ಲೂಕು ಮಟ್ಟದಲ್ಲಿ ಒಕ್ಕಲಿಗ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಮಂಜೂರು ಮಾಡುವಂತೆ ಸಂಘದ ವತಿಯಿಂದ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿ ಸರ್ಕಾರಿ ಜಾಗದ ಕೊರತೆಯಿರುವುದರಿಂದ ಪಟ್ಟಣ ಪಂಚಾಯಿತಿಯ ಸಿಎ (CA) ಸೈಟ್‌ನಲ್ಲಿ ಜಾಗ ಗುರುತಿಸಿಕೊಡುವಂತೆ ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ ಅವರ ಗಮನಕ್ಕೆ ತರಲಾಯಿತು. ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡುವುದಾಗಿ ಭರವಸೆ ನೀಡಿದರು.

    ಸಾಗರೆ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಜಾಗವನ್ನು ದಾನವಾಗಿ ನೀಡಿದ ಸಮಾಜದ ಹಿರಿಯರಾದ ಪುಟ್ಟೇಗೌಡ ಅವರನ್ನು ತಾಲ್ಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

    ಕಾರ್ಯಕ್ರಮದಲ್ಲಿ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಬಿ.ಜೆ. ಅಶೋಕ್ ಕುಮಾರ್, ಶಿವರಾಜು, ಕಾರ್ಯದರ್ಶಿ ಅಶೋಕ್, ನಾಗೇಶ್, ಸಕಲೇಶ್ ಸಾಗರೆ, ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ, ಇಓ ಪ್ರೇಮಕುಮಾರ್, ಕೆಇಬಿ ಎಇಇ ರಮೇಶ್, ಮುಖಂಡರಾದ ಮಹೇಂದ್ರ, ಸಂಘದ ನಿರ್ದೇಶಕರುಗಳಾದ ರವಿ ಬಡಗಲಪುರ, ಮಹದೇವಸ್ವಾಮಿ, ಶಿವರಾಜು, ಶಿವಕುಮಾರ್, ನಾಗೇಗೌಡ, ಸುರೇಶ್, ವೆಂಕಟೇಶ್, ನಟರಾಜು, ರವಿಗೌಡ, ಕೇಶವ, ಬಾಬು, ಅಣ್ಣಯ್ಯಸ್ವಾಮಿ ಸೇರಿದಂತೆ ವಿವಿಧ ಗ್ರಾಮಗಳ ಯಜಮಾನರು ಹಾಗೂ ಯುವಕರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.