ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಭಾನುವಾರ ವಿಜೃಂಭಣೆಯಿಂದ ಆಯೋಜಿಸಲಾಯಿತು.
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ CHOಗಳಾದ ಮೀನಾಕ್ಷಿ, ಶಂಕರ್ ಕಿರಣ್ ಅವರ ನೇತೃತ್ವದಲ್ಲಿ ಅಭಿಯಾನಕ್ಕೆ ಬೆಳಗ್ಗೆ ಚಾಲನೆ ನೀಡಲಾಯಿತು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಆರೋಗ್ಯ ಸಿಬ್ಬಂದಿಗಳಾದ ನಿರಂಜನ್, ಶ್ರೀಹರಿ, ಹನುಮಂತು ಹಾಗೂ ಆಶಾ ಕಾರ್ಯಕರ್ತೆಯರು ಮನೆ–ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿದರು. ಬಸ್ ನಿಲ್ದಾಣದಲ್ಲಿ ವಿಶೇಷ ಲಸಿಕಾ ಬೂತ್ ತೆರೆದು ಪ್ರಯಾಣಿಕರ ಮಕ್ಕಳಿಗೂ ಹನಿ ಹಾಕಲಾಯಿತು. ಇದರೊಂದಿಗೆ ಅಂಗನವಾಡಿ ಕೇಂದ್ರ ಸೇರಿದಂತೆ ಪ್ರಮುಖ ಸ್ಥಳಗಳಲ್ಲೂ ಬೂತ್ ಗಳನ್ನು ತೆರೆಯಲಾಗಿತ್ತು.
CHOಗಳು ಮತ್ತು ಆರೋಗ್ಯ ಸಿಬ್ಬಂದಿಯ ಶ್ರದ್ಧೆ, ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಅಭಿಯಾನ ಯಶಸ್ವಿಯಾಗಿ ನಡೆಯಿತು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




