nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    ತಿಪಟೂರು June 29, 2026

    SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ

    By adminJune 29, 2026No Comments2 Mins Read

    Provided by
    Provided by

    ತಿಪಟೂರು: ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಇಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ. ಹೆಚ್.ವಿ. ವಾಸು ಆತಂಕ ವ್ಯಕ್ತಪಡಿಸಿದರು.

    ಗಾಂಧಿ ನಗರದ ಮಸ್ಜಿದ್—ಎ–ಮಹಾಜರೀನ್, ಜನಸ್ಪಂದನ ಟ್ರಸ್ಟ್ ಹಾಗೂ ಸೌಹಾರ್ದ ತಿಪಟೂರು ಸಹಯೋಗದಲ್ಲಿ ಎಸ್‌ ಇಆರ್ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಮನೆ ಮನೆಗೆ ಅಧಿಕಾರಿಗಳು ತೆರಳಿ, ಎಸ್‌ ಇಆರ್ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಹಿಂದೆ ಎಷ್ಟು ಬಾರಿ ಮತ ಚಲಾಯಿಸಿದ್ದವರೂ ಸೇರಿದಂತೆ, ಎಲ್ಲರೂ ಮತ್ತೆ ದಾಖಲೆಗಳನ್ನು ಸಲ್ಲಿಸಿ, ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಮತದಾನದ ಹಕ್ಕು ದೀರ್ಘ ಹೋರಾಟದ ಫಲವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲಾ ಸಮುದಾಯಗಳ ತ್ಯಾಗದ ಪ್ರತಿಫಲವಾಗಿ ಸಂವಿಧಾನ ಜಾರಿಗೆ ಬಂದ ಮೊದಲ ದಿನದಿಂದಲೇ ಸಾರ್ವತ್ರಿಕ ಮತದಾನದ ಹಕ್ಕು ನೀಡಲಾಗಿದೆ. ಮಹಿಳೆಯರು, ದಲಿತರು, ಆದಿವಾಸಿಗಳು, ಅಲೆಮಾರಿ ಸಮುದಾಯಗಳು ಹಾಗೂ ಅಲ್ಪಸಂಖ್ಯಾತರು ದಾಖಲೆಗಳ ತಾಂತ್ರಿಕ ಸಮಸ್ಯೆಯಿಂದ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು ಎಂದರು.

    ಮೃತಪಟ್ಟವರ ಹಾಗೂ ವಿದೇಶಿ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಅಗತ್ಯವೇ ಸರಿ. ಆದರೆ ಅನರ್ಹರನ್ನು ಹೊರಗಿಡುವ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಸುಮಾರು 14 ರಾಜ್ಯಗಳಲ್ಲಿ ಈಗಾಗಲೇ ಆರು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಅವರಲ್ಲಿ ಬಹುಪಾಲು ಜೀವಂತ ನಾಗರಿಕರೇ ಆಗಿದ್ದಾರೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

    | ಡಾ.ಹೆಚ್.ವಿ.ವಾಸು, ಜಾಗೃತ ಕರ್ನಾಟಕ.

    ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ (ಟೂಡಾ) ಮಾತನಾಡಿ, ಮತದಾನದ ಹಕ್ಕಿನ ಸಂರಕ್ಷಣೆಗಾಗಿ ಬೂತ್ ಮಟ್ಟದ ಏಜೆಂಟ್‌ಗಳು ಮಹತ್ವದ ಪಾತ್ರ ವಹಿಸಬೇಕಿದ್ದು, ಮೊದಲು ತಮ್ಮ ಮನೆಯವರು ಹಾಗೂ ನೆರೆಹೊರೆಯವರ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಪರಿಶೀಲಿಸಿ, ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಅಥವಾ ಚುನಾವಣಾ ಆಯೋಗವೇ ಎಲ್ಲವನ್ನೂ ಮಾಡುತ್ತದೆ ಎಂದು ಕಾಯದೆ ನಾಗರಿಕರು ಸ್ವತಃ ಎಚ್ಚರಿಕೆ ವಹಿಸಬೇಕಾಗಿದೆ. ಬೆರಳೆಣಿಕೆಯ ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದ ಕೋಟ್ಯಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ಈ ದೇಶದ ಕಾನೂನು ಒಪ್ಪುವುದಿಲ್ಲ.

    ಅರಿವು ಕಾರ್ಯಕ್ರಮದಲ್ಲಿ ಜಾಗೃತ ಕರ್ನಾಟಕದ ಆದಂ ಖಾನ್ ಎಸ್‌ಇಆರ್ ಪ್ರಕ್ರಿಯೆ ಕುರಿತು, ಪ್ರೊಜೆಕ್ಟರ್ ಮೂಲಕ ಪರದೆಯ ಮೇಲೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಐಟಿಯು ಮುಖಂಡ ಎನ್.ಕೆ.ಸುಬ್ರಹ್ಮಣ್ಯ, ಹಜ್ರತ್ ಫಾರೂಕ್, ಜಲೀಲ್, ಸೌಹಾರ್ದದ ಅಲ್ಲಾಬಕಾಶ್, ಬೆಲೆ ಕಾವಲು ಸಮಿತಿಯ ಶ್ರೀಕಾಂತ್ ಕೆಳಹಟ್ಟಿ, ನಗರಸಭೆ ಮಾಜಿ ಸದಸ್ಯ ಮಹಮದ್ ಗೌಸ್ ಮತ್ತು ಸೈಯದ್ ಸಾದತ್ ಸೇರಿದಂತೆ ಮಸೀದಿಯ ಮುತವಲ್ಲಿಗಳು, ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.