nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    ಕೊರಟಗೆರೆ June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    By adminJune 29, 2026No Comments2 Mins Read

    ಕೊರಟಗೆರೆ: ತಾಲೂಕಿನಲ್ಲಿ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಜ್ಯೋತ್ಸ್ನಾ ರೆಡ್ಡಿ ಕರೆ ನೀಡಿದರು.

    ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊರಟಗೆರೆ ರೋಟರಿ ಕ್ಲಬ್ ಸಹಯೋಗದಲ್ಲಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನಿಂದ ಮೂರು ದಿನಗಳ ಕಾಲ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು.

    ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷ ಎ.ಜಿ. ಮಂಜುನಾಥ್ ಮಾತನಾಡಿ, ರೋಟರಿ ಇಂಟರ್ ನ್ಯಾಷನಲ್ ಕಳೆದ 35 ವರ್ಷಗಳಿಂದ ‘ಎಂಡ್ ಪೋಲಿಯೋ ನೌ’ ಅಭಿಯಾನ ನಡೆಸುತ್ತಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮ ಹಾಗೂ ಮನೆಗೆ ಭೇಟಿ ನೀಡಿ ಅಭಿಯಾನ ಯಶಸ್ವಿಗೊಳಿಸಲಾಗುವುದು ಎಂದರು.

    ರೋಟರಿ ಚಾರ್ಟೆಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಸರ್ಕಾರದೊಂದಿಗೆ ಕೈಜೋಡಿಸಿ ಶೇ.100ರಷ್ಟು ಲಸಿಕಾ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

    ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಮಕೃಷ್ಣ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಮೂರು ದಿನಗಳ ಕಾಲ ಬೂತ್‌ಗಳಲ್ಲೂ ಹಾಗೂ ಮನೆ ಮನೆಗೂ ತೆರಳಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.

    ಡಾ. ರವೀಶ್ ಮಾತನಾಡಿ, ಪೋಲಿಯೋ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ. ಒಂದೇ ಒಂದು ಮಗು ಲಸಿಕೆಯಿಂದ ವಂಚಿತವಾದರೂ ರೋಗ ಹರಡುವ ಅಪಾಯ ಇರುವುದರಿಂದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್, ತಾ.ಪಂ. ಇಒ ಗುರುಮೂರ್ತಿ, ಡಾ. ಆತ್ಮ ರಾಮ್ ಶೆಟ್ಟಿ, ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜು ಪಾಟೀಲ್, ರೋಟರಿ ನಿರ್ದೇಶಕ ಪ್ರಸನ್ನಕುಮಾರ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೋಷಕರು ಆರೋಗ್ಯ ಸಿಬ್ಬಂದಿಗೆ ಸಹಕರಿಸಿ, ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ. ತಾಲೂಕಿನ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 4 ಸಾರ್ವಜನಿಕ ಸ್ಥಳಗಳಲ್ಲಿ ಲಸಿಕಾ ಬೂತ್‌ ಗಳನ್ನು ತೆರೆಯಲಾಗಿದೆ. ಒಟ್ಟು 10,016 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

    — ಡಾ.ಜ್ಯೋತ್ಸ್ನಾ ರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.