nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    ಜಿಲ್ಲಾ ಸುದ್ದಿ July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    By adminJuly 1, 2026No Comments2 Mins Read

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಆರೋಪಿ ಪತಿಯನ್ನು ಭಾಲ್ಕಿ ತಾಲೂಕಿನ ಬೋಳೆಗಾವ್ ಗ್ರಾಮದ ಭಗವತ್ ಜ್ಞಾನೇಶ್ವರ ಎಂದು ಗುರುತಿಸಲಾಗಿದೆ. ಸದ್ಯ ಬೀದರ್ ನಗರದ ಶಿವನಗರದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ.

    ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿತ್ತು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಗಂಡನ ಮನೆಯವರು ವಿನಾಕಾರಣ ಜಗಳ ಮಾಡುತ್ತಿದ್ದರು. ವರ್ಷದ ಹಿಂದೆ ಸಂಜನಾಗೆ ನೀರಿನಲ್ಲಿ ಕೀಟನಾಶಕ ಬೆರೆಸಿ ನೀಡಲು ಯತ್ನಿಸಲಾಗಿತ್ತು. ಈ ಬಗ್ಗೆ ಅನುಮಾನ ವ್ಯಕ್ತವಾದ ನಂತರ ಸಂಜನ್ ಕೆಲ ತಿಂಗಳು ತವರು ಮನೆಯಲ್ಲಿ ಉಳಿದು, ಬಳಿಕ ಮತ್ತೆ ಗಂಡನ ಮನೆಗೆ ತೆರಳಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಜೂನ್ 25ರಂದು ಸಂಜೆ ಮೈಲಾರ ಮಲ್ಲಣ್ಣ ದೇವಸ್ಥಾನ ದರ್ಶನಕ್ಕೆ ಹೋಗಿ, ಅಲ್ಲಿಂದ ತವರು ಮನೆಗೆ ಹೋಗೋಣ ಎಂದು ಹೇಳಿ ಪತಿ ಭಾಗವತ್ ಪತ್ನಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ. ದೇವಸ್ಥಾನದಿಂದ ಹಿಂದಿರುಗುವ ವೇಳೆ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಕಬ್ಬಿಣದ ರಾಡ್‌ ನಿಂದ ತಲೆ ಹಾಗೂ ಕತ್ತಿನ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

    ಘಟನೆಯ ಮಾಹಿತಿ ತಿಳಿದ ಕೂಡಲೇ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿ ಸಂಜನಾಳನ್ನು ಬೀದರ್‌ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

    ಪತಿ ವಿವಾಹೇತರ ಸಂಬಂಧ ಹೊಂದಿದ್ದನ್ನು ಸಂಜನಾ ಪ್ರಶ್ನಿಸಿದ್ದಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಕೊಲೆಯ ನಿಖರ ಕಾರಣ ಪೊಲೀಸ್ ತನಿಖೆಯಿಂದಲೇ ತಿಳಿದುಬರಬೇಕಿದೆ.

    ಸಂಜನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ತರಲಾಗಿದ್ದು, ಆಸ್ಪತ್ರೆಯ ಶವಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಈ ಸಂಬಂಧ ಮೃತಳ ಸಹೋದರ ನೀಡಿದ ದೂರಿನ ಮೇರೆಗೆ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು…

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.