nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    ಕೊರಟಗೆರೆ July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    By adminJuly 1, 2026No Comments1 Min Read
    manjunath.jpg

    ಕೊರಟಗೆರೆ: ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ಜೂ. 30 ರಿಂದ ಜು. 29ರವರೆಗೆ ಮನೆ ಮನೆಗೆ ಬೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಅವರು, ಮತರದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರು ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ವಿಶೇಷ ಕಾಳಜಿವಹಿಸಬೇಕು. ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ರ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಅರ್ಹತೆ ಪಡೆದ 18 ವರ್ಷಗಳು ಪೂರ್ಣಗೊಂಡಿರುವ ಯುವ ಮತದಾರರ ಹೆಸರು ಸೇರ್ಪಡೆ ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಬಿ.ಎಲ್.ಓ ಅಧಿಕಾರಿಗಳಿಗೆ ಮನೆ ಮೆನೆಗೆ ತರಳಿ ಮಾಹಿತಿ ಸಂಗ್ರಹಿಸುವ ವಿಧಾನ ದಾಖಲೆಗಳ ಪರಿಶೀಲನೆ, ಮತದಾರರೊಂದಿಗೆ ಸಮನ್ವಯ ಸಾಧಿಸುವ ಕ್ರಮ, ಆನ್ ಲೈನ್ ಮಾಹಿತಿ, ನಮೂದುಮಾಡುವ ವಿಧಾನವನ್ನು ತರಬೇತಿಯೊಂದಿಗೆ ನಿರ್ದೇಶನ ನೀಡಲಾಗಿದೆ ಎಂದರು.

    ಮತದಾರರ ಪಟ್ಟಿಯನ್ನು ಸಂಪೂರ್ಣ ನಿಖರ ಹಾಗೂ ದೋಷರಹಿತವಾಗಿಸುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಮುಖಂಡರುಗಳು, ಬೂತ್ ಮಟ್ಟದ ಏಜೆಂಟ್ರು, ಸಾರ್ವಜನಿಕರು ಹಾಗೂ ಪ್ರತಿಕಾ ಮಾಧ್ಯಮದ ಪ್ರತಿನಿಧಿಗಳು ಬಿ.ಎಲ್.ಓ ಗಳೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದರು.
    ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ 6 ಹೋಬಳಿಗಳಿದ್ದು, ಒಟ್ಟು 2,09,945ಮತದಾರರು ಹೊಂದಿದ್ದು, ಅದರಲ್ಲಿ 1,03,303 ಪುರುಷರು, 1,06,185 ಮಹಿಳೆ ಇದ್ದಾರೆ. 240 ಮತಗಟ್ಟೆಗಳು, 240 ಬಿ.ಎಲ್ ಒ ಅವರನ್ನ ನೇಮಿಸಲಾಗಿದೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.