nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    ಕೊರಟಗೆರೆ July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    By adminJuly 1, 2026No Comments1 Min Read
    madaka.jpg

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ತಾಲೂಕಿನ ನಾಲ್ಕು ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು.

    ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 1,000ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಸುಮಾರು 1.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಭಾಗವಹಿಸಿದರು.

    ತಾಲ್ಲೂಕಿನ ಪ್ರಿಯದರ್ಶಿನಿ ಪಿಯು ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು (ಹೊಳವನಹಳ್ಳಿ), ಸರ್ಕಾರಿ ಪ್ರೌಢಶಾಲೆ (ಇರಕಸಂದ್ರ ಕಾಲೊನಿ) ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು (ತೀತ) ಕೇಂದ್ರಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿಧ ಕೇಂದ್ರಗಳಲ್ಲಿ ಪೊಲೀಸ್ ಅಧಿಕಾರಿಗಳು, ಪ್ರಾಂಶುಪಾಲರು, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು, ಯೋಜನೆಯ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಬೆಂಗಳೂರು ಎಸ್ ಪಿ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಮಾದಕ ವ್ಯಸನದ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಅದರ ಪರಿಣಾಮಗಳು ಹಾಗೂ ಕಾನೂನು ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

    ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಅವರು ವಿದ್ಯಾರ್ಥಿ ಜೀವನದಲ್ಲಿ ಪೋಷಕರು ಹಾಗೂ ಗುರು ಹಿರಿಯರ ಮಾರ್ಗದರ್ಶನದ ಮಹತ್ವವನ್ನು ವಿವರಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.