nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026
    Facebook Twitter Instagram
    ಟ್ರೆಂಡಿಂಗ್
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    ತುಮಕೂರು July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ ಅವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್‌, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
    By adminJuly 2, 2026No Comments2 Mins Read
    m eshwar

    ತುಮಕೂರು: ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಈಶ್ವರ್ ಅವರ ಸ್ವಗ್ರಾಮ ಆಂಧ್ರಪ್ರದೇಶದ ಹೇಮಾವತಿ ಬಳಿಯ ಕೆಂಕೆರೆಯಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.

    ನಗರದ ಪತ್ರಿಕಾ ಭವನ ಬಳಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರ ಇಡಲಾಗಿತ್ತು. ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಖಜಾಂಚಿ ಹಾರೋಗೆರೆ ಸತೀಶ್ ಹಾಗೂ ಪದಾಧಿಕಾರಿಗಳು, ಪತ್ರಿಕೋದ್ಯಮಿ ಡಾ.ಎಸ್. ನಾಗಣ್ಣ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಆರ್. ಕಾಮರಾಜ್, ಚಿ.ನಿ. ಪುರುಷೋತ್ತಮ್, ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಕರುಣಾಕರ್, ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ, ತುಮಕೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶಶಿಧರ್ ದೋಣಿಹಕ್ಲು ಸೇರಿದಂತೆ ಜಿಲ್ಲೆಯ ಹಲವು ಪತ್ರಕರ್ತರು ಹಾಗೂ ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

    ನೇತ್ರ ದಾನ:

    ಮೃತ ಈಶ್ವರ್ ಅವರ ಕಣ್ಣುಗಳನ್ನು ಅವರ ಕುಟುಂಬದವರು ದಾನ ನೀಡಿದರು. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆಯುತ್ತಿದ್ದ ಗೆಳೆಯ ಈಶ್ವರ್ ಅಗಲಿಕೆಗೆ ಪತ್ರಕರ್ತರು ಶೋಕ ವ್ಯಕ್ತಪಡಿಸಿದರು.

    ಹಲವು ಗಣ್ಯರಿಂದ ಸಂತಾಪ:

    ಪತ್ರಕರ್ತ ಈಶ್ವರ್ ನಿಧನಕ್ಕೆ ಡಿಸಿಎಂ ಪರಮೇಶ್ವರ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರು ಪತ್ರಕರ್ತರಾಗಿ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

    ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಗಂಗಹನುಮಯ್ಯ, ಎಂ.ಡಿ. ಲಕ್ಷಿನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಜಿಲ್ಲಾ ವಕ್ತಾರ ಜೆ. ಜಗದೀಶ್ ಮೊದಲಾದವರು ಈಶ್ವರ್ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

    July 2, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ಕೊರಟಗೆರೆ: ತಾಲ್ಲೂಕಿನ ಹನುಮಂತಪುರ ಗ್ರಾಮಸ್ಥರನ್ನು 4 ದಿನಗಳಿಂದ ಸಾರ್ವಜನಿಕರನ್ನು ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬೆಚ್ಚಿಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ…

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.