ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ ಮಿಡಿಗೇಶಿ ಗ್ರಾ.ಪಂ. ವ್ಯಾಪ್ತಿಗೆ ಬರುವ ನಲ್ಲೀಕಾಮನಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಆಂಧ್ರ ರಾಜ್ಯದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲ್ಲೂಕಿನ ಬುಳಸಂದ್ರ ಗ್ರಾಮದ ಪ್ರಭಾಕರ್ (40) ವ್ಯಕ್ತಿಯೇ ಸಾವನ್ನಪ್ಪಿರುವ ದುರ್ದೈವಿ. ಈತ ನಲ್ಲೀಕಾಮನಹಳ್ಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ತೀವ್ರ ಪೆಟ್ಟಾದ ಪ್ರಭಾಕರ್ ಅವರನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಚಿಕಿತ್ಸೆ ಫಲಿಸದೆ ಸದರಿ ವ್ಯಕ್ತಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಸಿಪಿಐ ಹನುಮಂತರಾಯಪ್ಪ, ಪಿಎಸ್ ಐ ರವೀಂದ್ರ ಅವರುಗಳು ಭೇಟಿ ನೀಡಿ ಪರಿಶೀಲಿಸಿದರು.
ಮೃತನ ಪತ್ನಿ ನಾಗಮಣಿ ಎಂಬುವರು ನೀಡಿದ ದೂರಿನ ಮೇರೆಗೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


