nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    ಕುಣಿಗಲ್ July 5, 2026

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    By adminJuly 5, 2026No Comments2 Mins Read
    congaress

    ಕುಣಿಗಲ್: ಚುನಾವಣಾ ಆಯೋಗದ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಬಿಎಲ್‌ ಒಗಳ ಕರ್ತವ್ಯಕ್ಕೆ, ಜೆಡಿಎಸ್ ಕಾರ್ಯಕರ್ತರು ಅಡ್ಡಿಪಡಿಸಿ ಅವರನ್ನು ಭಯ ಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಅವರು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಪಟ್ಟಣದ 19 ನೇ ವಾರ್ಡ್‌ನಲ್ಲಿ ಒಂದು ಮನೆಯಲ್ಲಿ ಕುಳಿತುಕೊಂಡು ಬಿಎಲ್‌ ಒ ಇಂದುಮತಿ ಎಸ್‌ ಐಆರ್ ಮಾಹಿತಿ ಸಂಗ್ರಹಣೆ ಮಾಡಿದ್ದಾರೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ಅವರ ಆರೋಪಕ್ಕೆ ತಿರುಗೇಟು ನೀಡಿದ ದೀಪಕ್‌ಗೌಡ ಇಂದುಮತಿ ಅವರು ಯಾವುದೇ ಒಂದು ಮನೆಯಲ್ಲಿ ಕುಳಿತುಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಲ್ಲ. ಇಂದುಮತಿ ಅವರಿಗೆ ನೀಡಿರುವ 19 ನೇ ವಾರ್ಡ್‌ನಲ್ಲಿ 1180 ಮತಗಳಿದ್ದು, ಅವರು ಅಂಗನವಾಡಿ ಕೇಂದ್ರದಲ್ಲಿ ಕುಳಿತುಕೊಂಡು ಆಯಾ ಕುಟುಂಬಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ಬೇರ್ಪಡಿಸುತ್ತಿದ್ದ ವೇಳೆ ಅಲ್ಲಿಯ ಜನರು ನಮಗೆ ಸೇರಿದ ಫಾರಂ ಕೊಡಿ ಎಂದು ಬಿಎಲ್‌ ಒ ಇಂದುಮತಿ ಅವರನ್ನು ಕೇಳಿದ್ದಾರೆ.

    ಅಷ್ಟರಲ್ಲಿ ಅಲ್ಲಿಗೆ ಬಂದ ಜೆಡಿಎಸ್ ಕಾರ್ಯಕರ್ತರು ವಿಡಿಯೋ ಮಾಡಿ ಬಿಎಲ್‌ ಒ ಒಂದು ಮನೆಯಲ್ಲಿ ಕುಳಿತುಕೊಂಡು ಗುಂಪು ಕಟ್ಟಿಕೊಂಡು ಮತ ಪರಿಷ್ಕರಣೆ ಮಾಡಿದ್ದಾರೆ, ಇದಕ್ಕೆ ಶಾಸಕರ ಬೆಂಬಲವಿದೆ, ಬಿ.ಎಲ್.ಒಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಬಿಎಲ್‌ಒಗೆ ತಹಸೀಲ್ದಾರ್, ಜಿಲ್ಲಾಧಿಕಾರಿಗಳು ನೋಟಿಸ್ ಸಹ ನೀಡಿದ್ದಾರೆ. ಇದಕ್ಕೆ ಇಂದುಮತಿ ಅವರು ಸಹಾ ಉತ್ತರ ನೀಡಿದ್ದಾರೆ. ಪ್ರಭಾವಿ ರಾಜಕಾರಣಿ ಆದ ತಕ್ಷಣ ಮತದಾರರ ಪಟ್ಟಿಯಲ್ಲಿ ಹೆಸರನ್ನು ತೆಗೆದುಹಾಕಬಹುದು, ಸೇರಿಸಬಹುದು ಎಂಬುದು ಅವರ ಭ್ರಮೆಯಾಗಿದೆ. ನೀವು ಬಿಎಲ್‌ಒಗಳ ಕಾರ್ಯಕ್ಕೆ ಅಡ್ಡಿ ಪಡಿಸಿ ಭಯ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಜಗದೀಶ್ ಅವರನ್ನು ಕುಟುಕಿದರು.

    ದಿನಾಂಕ ವಿಸ್ತರಿಸಿ: ಒಬ್ಬ ಬಿಎಲ್‌ ಒ ದಿನ ಒಂದಕ್ಕೆ 10 ಮತದಾರರ ಪರಿಷ್ಕರಣೆ ಮಾಡಿದರೆ ಸಾಕು ಎಂದು ಹೇಳಿದ್ದೀರಿ. ಒಂದು ವಾರ್ಡ್‌ನಲ್ಲಿ 1200 ರಿಂದ 1600 ಕ್ಕೂ ಅಧಿಕ ಮತದಾರರಿದ್ದಾರೆ. ಒಂದು ದಿನದಲ್ಲಿ 10 ಜನ ಮತದಾರರ ಪರಿಷ್ಕರಣೆ ಮಾಡಿದರೆ ಎಷ್ಟು ದಿನ ಬೇಕಾಗುತ್ತದೆ ಎಂದು ಪ್ರಶ್ನಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲೋಹಿತ್, ಮುಖಂಡರಾದ ಸೋಮಸುಂದರ್, ಶಿವಕುಮಾರ್ ಮತ್ತಿತರರು ಇದ್ದರು.

    ತಾಲೂಕಿನಲ್ಲಿ ಐದು ಸಾವಿರಕ್ಕೂ ಅಧಿಕ ಮಂದಿ ಬಾಂಗ್ಲಾ ವಲಸಿಗರು ಇರುವರು ಎಂದು ನಿಮ್ಮ ಬಳಿ ದಾಖಲೆ ಇದ್ದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿ, ನಾವು ನಿಮ್ಮೊಂದಿಗೆ ಕೈ ಜೋಡಿಸಿ, ವಲಸಿಗರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಿಸೋಣ. ಆದರೆ ಬಾಂಗ್ಲಾ ವಲಸಿಗರ ಮತಗಳಿಂದ ಡಾ.ಎಚ್.ಡಿ.ರಂಗನಾಥ್ ಅವರು ಶಾಸಕರಾಗಿಲ್ಲ. ಬಿಎಲ್‌ಒ ವಿರುದ್ಧ ದೂರು ಕೊಡುವುದನ್ನು ಬಿಟ್ಟು, ನಿಮ್ಮ ಪಕ್ಷದ ನಾಯಕರು ಕೇಂದ್ರ ಸಚಿವರಾಗಿದ್ದಾರೆ, ಅವರ ಮೂಲಕ ದಿನಾಂಕ ವಿಸ್ತರಣೆಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ.

    — ಎಚ್.ಎಸ್.ದೀಪಕ್‌ಗೌಡ, ಕಾಂಗ್ರೆಸ್ ವಕ್ತಾರರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.