ಬೆಂಗಳೂರು: ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ಪೊಲೀಸರ ಕಣ್ಣಿಗೆ ಮಣ್ಣೆರಚಲು ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸುತ್ತಿದ್ದರಿಂದ, ಪೊಲೀಸರಿಗೂ ಈತನನ್ನು ಹಿಡಿಯುವುದು ಸವಾಲಾಗಿತ್ತು.
ನಟೋರಿಯಸ್ ಪಿಂಪ್ ಚೇತನ್ ವಿರುದ್ಧ ಬೆಂಗಳೂರಿನ ಪೀಣ್ಯ, ಬಾಗಲಗುಂಟೆ ಹಾಗೂ ಸಿಸಿಬಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರಿಗೆ ವಾಂಟೆಡ್ ಆಗಿದ್ದ ಈತ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ.
ಪೀಣ್ಯ ಬಳಿಯ ರೂಮ್ ಒಂದರಲ್ಲಿ ಚೇತನ್ ಅಡಗಿರುವ ಬಗ್ಗೆ ಮಾದನಾಯಕನಹಳ್ಳಿ ಪೊಲೀಸರಿಗೆ ನಿಖರ ಮಾಹಿತಿ ಲಭ್ಯವಾಗಿತ್ತು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


