ಕೊರಟಗೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ಉದ್ಘಾಟನಾ ಸಮಾರಂಭ ನಡೆಯಿತು.
ದೀಪ ಬೆಳಗಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ತಾಲೂಕು ವೈದ್ಯಾಧಿಕಾರಿ ಡಾ.ಜ್ಯೋತ್ಸ್ನಾ ರೆಡ್ಡಿ ಮಾತನಾಡಿ, “ಗರ್ಭಕಂಠದ ಕ್ಯಾನ್ಸರ್ ನಮ್ಮ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಪ್ರಮುಖ ಆರೋಗ್ಯ ಕಾಳಜಿಯಾಗಿದೆ. ಇದು ಹ್ಯೂಮನ್ ಪ್ಯಾಪಿಲೋಮಾ ವೈರಸ್‌ನಿಂದ ಉಂಟಾಗುತ್ತದೆ. ಲಸಿಕೆಯಿಂದ ತಡೆಯಬಹುದಾದ ಏಕೈಕ ಕ್ಯಾನ್ಸರ್ ಇದಾಗಿದೆ. ಆದ್ದರಿಂದ 14 ವರ್ಷದ ಎಲ್ಲಾ ಹೆಣ್ಣುಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು” ಎಂದು ಕರೆ ನೀಡಿದರು.
ಕೊರಟಗೆರೆ ತಾಲ್ಲೂಕಿನಲ್ಲಿ ಈಗಾಗಲೇ ಶೇ.70ರಷ್ಟು ಅಭಿಯಾನ ಮುಗಿದಿದ್ದು, ಉಳಿದ ವಿದ್ರ‍್ಥಿನಿಯರಿಗೂ ಶಾಲೆಗಳ ಮೂಲಕ ಲಸಿಕೆ ನೀಡಲಾಗುತ್ತಿದೆ ಎಂದರು.
ತಾ.ಪಂ. ಇ.ಒ ಅಪೂರ್ವ ಅನಂತರಾಮು ಮಾತನಾಡಿ, ಪೋಷಕರು ಯಾವುದೇ ಭಯವಿಲ್ಲದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಇದು ಮಕ್ಕಳ ಭವಿಷ್ಯದ ರಕ್ಷಣೆಗೆ ಬಹಳ ಮುಖ್ಯ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್ ಬೇಗಂ ಅವರು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಸಹಕಾರ ನೀಡಿ ಶೇ.100ರಷ್ಟು ಗುರಿ ತಲುಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆ ಎ ಎಮ್ ಒ ಡಾ. ರಾಮಕೃಷ್ಣಯ್ಯ, ಶಾಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


