ತುಮಕೂರು: ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2026–27ನೇ ಸಾಲಿನಲ್ಲಿ ಪರಿಸರ ಸ್ನೇಹಿ ಸುಸಜ್ಜಿತ ಕಿಯೋಸ್ಕ್ ಮಾದರಿಯ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಉತ್ಪನ್ನ ಮಾರಾಟ ಮಾಡಲು ಸಾರ್ವಜನಿಕ ಸಹಭಾಗಿತ್ವದ ಮೂಲಕ ಮತ್ಸ್ಯವಾಹಿನಿ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಮೀನುಗಾರಿಕೆಯಲ್ಲಿ ತೊಡಗಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಾಹನ ಸೌಲಭ್ಯಕ್ಕಾಗಿ ಭದ್ರತಾ ಠೇವಣಿಯನ್ನು ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ/ಪ.ಪಂಗಡ/ಮಹಿಳೆಯರಿಗೆ 50 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ. ಆಸಕ್ತರು ಜುಲೈ 17ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಹಾಗೂ ತುಮಕೂರು, ತಿಪಟೂರು, ತುರುವೇಕೆರೆ, ಕುಣಿಗಲ್, ಸೇರಿದಂತೆ ವಿವಿಧ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


