ತುರುವೇಕೆರೆ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2026–27 ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಬೆಳೆಗಳಿಗೆ ಸಾಲ ಪಡೆದಿರುವ/ಪಡೆಯುವ ರೈತರಿಗೆ ಕಡ್ಡಾಯವಾಗಿ ವಿಮೆಗೆ ಒಳಪಡಿಸಿದ್ದು ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ.
ಬೆಳೆ ವಿಮೆಗೆ ಒಳಪಟ್ಟ ಅಡಕೆ, ಮಾವು, ಪಪ್ಪಾಯಿ ಮತ್ತು ದಾಳಿಂಬೆ ಬೆಳೆಗಳಿಗೆ ತುರುವೇಕೆರೆ ತಾಲ್ಲೂಕಿಗೆ ಸಂಬಂಧಪಟ್ಟ ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ / ಗ್ರಾಮ ಒನ್ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿರುತ್ತದೆ.
ಈ ಯೋಜನೆಯಲ್ಲಿ ಒಳಪಡಿಸಲಾಗುವ ಎಲ್ಲಾ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸುವುದು ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿ ಬೆಳೆ ವಿಮೆಗೆ ಒಳಪಡಿಸಲಾಗುವುದು ಎಂದು ತಿಳಿಸಿದೆ. ಅಡಕೆ, ದಾಳಿಂಬೆ ಪರಂಗಿ ಬೆಳೆಗಳಿಗೆ ನೋಂದಾಯಿಸಿಕೊಳ್ಳಲು ಕೊನೆಯ ದಿನಾಂಕ ಜು.15 ಮತ್ತು ಮಾವು ಬೆಳೆಗೆ ಜು.31 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಸುನಿಲ್ ಕುಮಾರ್ ಎಂ.ಕೆ. ಕಸಬಾ ಹೋಬಳಿ 9164481418, ಮಧುಚಂದ್ರ ಎಂ. ದಂಡಿನಶಿವರ ಹೋಬಳಿ 81050 76807, ಶ್ರೀನಿವಾಸ ಬಿ.ವಿ, ದಬ್ಬೇಘಟ್ಟ ಹೋಬಳಿ : 7411861772, ಗೋಪಾಲ ಮಾಯಸಂದ್ರ ಹೋಬಳಿ 9964941890 ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸುರೇಶ್. ಎಚ್ ತಾಲ್ಲೂಕಿನ ರೈತರಲ್ಲಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


