ಗುಬ್ಬಿ: ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಾಲೂಕು ಮಟ್ಟದ ಪ.ಜಾತಿ ಮತ್ತು ಪ.ವರ್ಗಗಳ ಕುಂದುಕೊರತೆ ಸಭೆಯನ್ನು ಜು.13ರಂದು ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11.30 ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಸಭೆ ಹಮ್ಮಿಕೊಂಡಿದ್ದು, ಸದರಿ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮಾಹಿತಿಯೊಂದಿಗೆ ಖುದ್ದು ಹಾಜರಿರುವಂತೆ ಸೂಚಿಸಿದ್ದು, ಎಲ್ಲಾ ಸಂಘಟನೆಗಳ ಮುಖಂಡರು ಪದಾಧಿಕಾರಿಗಳು ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಸಭೆಯಲ್ಲಿ, 29/09/2025 ರ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ನಡಾವಳಿಗಳಿಗೆ ಹಾಗೂ ಸದರಿ ದಿನಾಂಕ ಸಲ್ಲಿಕೆಯಾದ ಕುಂದು ಕೊರತೆಗಳ ಅಹವಾಲುಗಳ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ. ಹೊಸದಾಗಿ ಸಲ್ಲಿಸಬಹುದಾದ ಅಹವಾಲುಗಳು ಇದ್ದಲ್ಲಿ ಸಭೆಯಲ್ಲಿ ಸಲ್ಲಿಸಲು ಎಲ್ಲಾ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳಲ್ಲಿ ಕೋರಿದೆ. ಸದರಿ ವಿಷಯಗಳಿಗೆ ಸಂಬಂಧಿಸಿದಂತೆ ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


