ತುಮಕೂರು: ನಗರದ ಬಿ.ಹೆಚ್. ರಸ್ತೆಯ ತೋಟಗಾರಿಕೆ ಇಲಾಖೆ ರಸ್ತೆಯಲ್ಲಿರುವ ತುಮಕೂರು ಜಿಲ್ಲಾ ಬಲಿಜ ಸಂಘದ ವತಿಯಿಂದ ಆಗಸ್ಟ್ 2 ರಂದು ಹಮ್ಮಿಕೊಳ್ಳಲಾಗಿರುವ ಶ್ರೀ ಯೋಗಿ ನಾರೇಯಣ ಯತೀಂದ್ರರ 191 ನೇ ವರ್ಷದ ಜೀವ ಸಮಾಧಿ ಮಹೋತ್ಸವದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ.
2025–26 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಎಸ್ ಎಸ್ ಎಲ್ ಸಿ, 2ನೇ ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಬಿ.ಇ. ಮತ್ತು ಎಂಬಿಬಿಎಸ್ ಸೇರಿದಂತೆ ಇತರೆ ಉನ್ನತ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ಬಲಿಜ ಸಮುದಾಯದ ಗ್ರಾಮೀಣ ಹಾಗೂ ನಗರ ಭಾಗದ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಘದ ಸಂಚಾಲಕರುಗಳಾದ ಮಧುಗಿರಿ ಜಯರಾಮ್ (ಮೊಬೈಲ್: 9741669937) ಹಾಗೂ ಕೆ.ಶ್ರೀನಿವಾಸ್ (ದೂ.ಸಂಖ್ಯೆ: 9964231713) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್.ಹೆಚ್. ಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


