ತುಮಕೂರು: ಜನನ ಪ್ರಮಾಣ ಪತ್ರಗಳಲ್ಲಿ ಮಗುವಿನ ಹೆಸರು, ತಂದೆ ತಾಯಿ ಹೆಸರು, ಇನಿಷಿಯಲ್ ಹಾಗೂ ಇತರೆ ವಿವರಗಳಲ್ಲಿ ಉಂಟಾಗುವ ಸಣ್ಣಪುಟ್ಟ ಲೋಪದೋಷಗಳಿಂದ ಸಾಕಷ್ಟು ಪೋಷಕರು ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿದ್ದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಇಂತಹ ತಪ್ಪುಗಳನ್ನು ತಡೆಯಲು ಸೂಕ್ತ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದರು.
ಸದರಿ ಮನವಿಯನ್ನು ಪರಿಗಣಿಸಿರುವ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ರಕ್ಷಣಾ ಆಯೋಗದ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ನಿರ್ದೇಶನ ನೀಡಿದ್ದಾರೆ.
ಈ ಆದೇಶ ಸಾವಿರಾರು ಮಕ್ಕಳು ಮತ್ತು ಪೋಷಕರ ಅನಗತ್ಯ ಅಲೆದಾಟವನ್ನು ತಪ್ಪಿಸಲು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಿಕಟಪೂರ್ವ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


