ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಹಾಗೂ ಮಾರುತಿ ವಿದ್ಯಾಕೇಂದ್ರ ಬೆಳಗುಂಬ, ತುಮಕೂರು ಇವರ ಸಹಯೋಗದಲ್ಲಿ ಜುಲೈ 17 ರಂದು ಬೆಳಗ್ಗೆ 10 ಗಂಟೆಗೆ ಮಾರುತಿ ವಿದ್ಯಾಕೇಂದ್ರ, ಕಾಲೇಜು ಸಭಾಂಗಣ, ಬೆಳಗುಂಬ, ತುಮಕೂರು ಇಲ್ಲಿ ಕಾನೂನು ಅರಿವು-ನೆರವು ಮತ್ತು ಪೋಕ್ಸೊ ಕಾಯ್ದೆ ಕುರಿತ ಕಾರ್ಯಕ್ರಮ ಆಯೋಜಿಸಲಾಗಿದೆ.
ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಲೋಕೇಶ ಧನಪಾಲ ಹವಲೆ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಾರುತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಸುಷ್ಮಾ ಶರ್ಮ ಅವರು ವಹಿಸುವರು.
ಸಂಪನ್ಮೂಲ ವ್ಯಕ್ತಿಯಾಗಿ ಪ್ಯಾನಲ್ ವಕೀಲರಾದ ಆಶಾ ಅವರು ಆಗಮಿಸುವರು. ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕೆ.ಎಂ.ರಾಮಕೃಷ್ಣಯ್ಯ ಕಾರ್ಯಕ್ರಮ ಕುರಿತು ಮಾತನಾಡುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


