ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಈ ಸುದ್ದಿ ಆಘಾತ ನೀಡಿದೆ.
ಶೇನ್ ವಾರ್ನ್ ಅವರು ತಮ್ಮ ವಿಲ್ಲಾದಲ್ಲಿ ಅಸ್ವಸ್ಥರಾಗಿದ್ದರು, ಕೂಡಲೇ ಅವರಿಗೆ ಚಿಕಿತ್ಸೆ ನೀಡಿದರೂ ಶೇನ್ ವಾರ್ನ್ (shane warne) ಅವರನ್ನು ಬದುಕಿಸಲು ಆಗಿಲ್ಲ ಎಂದು ಅಂತಾರಾಷ್ಟ್ರೀಯ ಕ್ರೀಡಾ ವಾಹಿನಿ ಸುದ್ದಿ ಪ್ರಕಟಿಸಿದೆ.
ಶೇನ್ ವಾರ್ನ್ ಹೃದಯಾಘಾತಕ್ಕೆ ಬಲಿಯಾಗಿರಬಹುದು ಎಂದು ಅನುಮಾನಿಸಲಾಗಿದೆ. ಆದರೆ ಈವರೆಗೂ ಶೇನ್ ವಾರ್ನ್ ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ.ಶೇನ್ ವಾರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಆಗಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ 708 ವಿಕೆಟ್ ಹಾಗೂ ಏಕದಿನ ಪಂದ್ಯಗಳಲ್ಲಿ 293 ವಿಕೆಟ್ ಪಡೆದು ಶೇನ್ ವಾರ್ನ್ ದಾಖಲೆ ನಿರ್ಮಿಸಿದ್ದರು.
ಆಸ್ಟ್ರೇಲಿಯಾ ಸತತ 3 ಬಾರಿ ವಿಶ್ವಕಪ್ ಗೆಲ್ಲುವಲ್ಲಿಯೂ ವಾರ್ನ್ ಪಾತ್ರ ದೊಡ್ಡದಿತ್ತು.ಆದರೆ ದಿಢೀರ್ ಶೇನ್ ವಾರ್ನ್ ಸಾವಿನ ಸುದ್ದಿ ಕೇಳಿ ಕ್ರೀಡಾ ಜಗತ್ತು ತತ್ತರಿಸಿದೆ. ಈ ಕುರಿತು ತನಿಖೆ ಆರಂಭವಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB