ತಿಪಟೂರು: ನಗರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜುಲೈ 16ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರೋಟರಿ ಸಂಸ್ಥೆಯ ಟ್ರಸ್ಟ್ ಅಧ್ಯಕ್ಷ ಬಿಸಿ ಪ್ರಭುಸ್ವಾಮಿ ತಿಳಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ತಿಪಟೂರಿನಲ್ಲಿ 1959ರಲ್ಲಿ ಪ್ರಾರಂಭವಾದ ರೋಟರಿ ಸಂಸ್ಥೆಯು ಕಳೆದ 66 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಇದೀಗ 67ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಪ್ರಕಾಶ್ ಅವರು ಯುವಕರಾಗಿದ್ದು, ದೀನದಲಿತರ ಹಾಗೂ ಬಡವರ ಪರವಾಗಿ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶವಾಗಿದೆ” ಎಂದರು.
ಮುಂದುವರಿದು ಮಾತನಾಡಿದ ಅವರು, “ಸಂಸ್ಥೆಯ ಹಿರಿಯರು ಹಾಗೂ ವಕೀಲರಾದ ಉಮೇಶ್ ಅವರು ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರ ದೀರ್ಘಕಾಲದ ಅನುಭವವು ರೋಟರಿ ಸಂಸ್ಥೆಯ ಜನೋಪಯೋಗಿ ಕೆಲಸಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಅನುಕೂಲವಾಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಪದಗ್ರಹಣ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷರಾದ ವನಿತಾ ಪ್ರಸನ್ನ ಅವರು ನೂತನ ಅಧ್ಯಕ್ಷರಾದ ಪ್ರಕಾಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರೋಟರಿ ಸಂಸ್ಥೆಯ ಮಾಜಿ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


