nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    ಜಿಲ್ಲಾ ಸುದ್ದಿ July 17, 2026

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    By adminJuly 17, 2026No Comments2 Mins Read
    shubha kalyan

    ತುಮಕೂರು: 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ–2026ರ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಿದ್ಧತೆ, ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಯಾಗಿ ಆಚರಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

    ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯ ಕಾರ್ಯಕ್ರಮಕ್ಕೆ ಅಗತ್ಯ ವೇದಿಕೆ ನಿರ್ಮಾಣ, ಗಣ್ಯ ಅತಿಥಿಗಳು ಹಾಗೂ ಆಹ್ವಾನಿತರಿಗೆ ಆಸನ ವ್ಯವಸ್ಥೆ, ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಸ್ವಚ್ಛತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮೂಲಸೌಕರ್ಯಗಳನ್ನು ಮುಂಚಿತವಾಗಿ ಸಿದ್ಧಪಡಿಸಬೇಕು ಎಂದು ತಿಳಿಸಲಾಯಿತು.

    ಪೆರೇಡ್ ಸಮಿತಿಯು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವು ಭಾರತ ಸರ್ಕಾರದ ನಿಯಮಾನುಸಾರ ನಡೆಯುವಂತೆ ನೋಡಿಕೊಳ್ಳಬೇಕು. ರಾಷ್ಟ್ರಧ್ವಜ, ಧ್ವಜಸ್ತಂಭ ಹಾಗೂ ವೇದಿಕೆಯ ವ್ಯವಸ್ಥೆಯನ್ನು ಪೂರ್ವಭಾವಿಯಾಗಿ ಪರಿಶೀಲಿಸಿ, ಪಥಸಂಚಲನ ಮತ್ತು ಗೌರವ ವಂದನೆ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಅಲ್ಲದೇ, ಎಲ್ಲಾ ಕಾರ್ಯಕ್ರಮಗಳು ನಿಗದಿತ ವೇಳಾಪಟ್ಟಿಯಂತೆ ನಡೆಯುವಂತೆ ಸಮನ್ವಯ ಸಾಧಿಸಲು ತಿಳಿಸಲಾಯಿತು.

    ಸ್ವಾಗತ ಸಮಿತಿಯು ಗಣ್ಯ ಅತಿಥಿಗಳು ಹಾಗೂ ಆಹ್ವಾನಿತರನ್ನು ಆತ್ಮೀಯವಾಗಿ ಸ್ವಾಗತಿಸಿ ಸೂಕ್ತ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು. ಸನ್ಮಾನ ಸಮಿತಿಯು ಕಾರ್ಯಕ್ರಮದಲ್ಲಿ ಸನ್ಮಾನಗೊಳ್ಳುವ ಗಣ್ಯರಿಗೆ ಅಗತ್ಯ ಸಿದ್ಧತೆಗಳನ್ನು ನಿರ್ವಹಿಸಬೇಕು. ಸಿಹಿ ತಿಂಡಿ ವಿತರಣೆ ಸಮಿತಿಯು ಕಾರ್ಯಕ್ರಮದ ನಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪೆರೇಡ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಸಿಹಿ ತಿಂಡಿಯನ್ನು ವ್ಯವಸ್ಥಿತವಾಗಿ ವಿತರಿಸುವಂತೆ ಸೂಚಿಸಲಾಯಿತು.

    ಜಿಲ್ಲಾಡಳಿತ ಕಚೇರಿ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರವನ್ನು ಅಳವಡಿಸುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಎಲ್ಲಾ ವ್ಯವಸ್ಥೆಗಳನ್ನು ಪೂರ್ವಭಾವಿಯಾಗಿ ಪೂರ್ಣಗೊಳಿಸಿ, ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ರಾಷ್ಟ್ರದ ಗೌರವಕ್ಕೆ ತಕ್ಕ ರೀತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಎನ್.ತಿಪ್ಪೇಸ್ವಾಮಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.