nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    ರಾಷ್ಟ್ರೀಯ ಸುದ್ದಿ July 21, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    By adminJuly 21, 2026No Comments2 Mins Read
    kunigal protest

    ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಖಂಡಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ವೇದಿಕೆ ರಾಜ್ಯ ಅಧ್ಯಕ್ಷ ಹೆಚ್.ಜಿ.ರಮೇಶ್ ಮಾತನಾಡಿ, ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ದೇಹವನ್ನು ದಂಡಿಸಿಕೊಂಡು, ಪ್ರಾಣವನ್ನು ಲೆಕ್ಕಿಸದೇ ಸಾಮಾಜಿಕ ಹೋರಾಟಗಾರ ವಿಜ್ಞಾನಿ ಸೋನಂ ವಾಂಗ್‌ಚುಕ್ ಅವರು ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಮಾಜಿಕ ಕಾಳಜಿ ಇಟ್ಟುಕೊಂಡು ಯಾರೆಲ್ಲಾ ಹೋರಾಟ ನಡೆಸುತ್ತಿದ್ದಾರೋ ಯಾರೆಲ್ಲಾ ಸತ್ಯ ಹೇಳುತ್ತಾರೋ ಅವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

    ಸೋನಂ ವಾಂಗ್ ಚುಕ್ ಅವರು ಲಡಾಖ್‌ ನ ಪ್ರಸಿದ್ಧ ಇಂಜಿನಿಯರ್, ನವೋದ್ಯಮಿ, ಶಿಕ್ಷಣ ಸುಧಾರಕ ಹಾಗೂ ಪರಿಸರವಾದಿಯಾಗಿದ್ದಾರೆ. ಅವರು 1988 ರಲ್ಲಿ ಸ್ಥಾಪಿಸಲಾದ ಎಸ್‌ ಇಸಿಎಂಒಎಲ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ. ದೇಶದ ಸೈನಿಕರಿಗೆ ಸೋಲಾರ್ ಟೆಂಟ್‍ ಗಳನ್ನು ನಿರ್ಮಾಣ ಮಾಡಿಕೊಟ್ಟ ಮೊದಲಿಗರಾಗಿದ್ದಾರೆ. ಅಂತಹವರಿಗೆ ದೇಶ ವಿರೋಧಿ ಪಟ್ಟವನ್ನು ಕಟ್ಟಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಅವರು ಟೀಕಿಸಿದರು.

    ವೇದಿಕೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ. ಮೂರ್ತಿ ಮಾತನಾಡಿ, ನೀಟ್ ಪರೀಕ್ಷೆ ಸಂಬಂಧಿಸಿದ ಎಲ್ಲಾ ಅಕ್ರಮ ಕುರಿತು ಸಂಪೂರ್ಣ ಪಾರದರ್ಶಕತೆ ನಿಷ್ಪಕ್ಷಪಾತ ತನಿಖೆ ಆಗಬೇಕು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು. ಭ್ರಷ್ಟಾಚಾರ ವಿರೋಧಿ, ರೈತ ಪರ ಸಾರ್ವಜನಿಕ ಹಿತಾಸಕ್ತಿಯ ಹೋರಾಟದಲ್ಲಿ ಭಾಗವಹಿಸುವ ನಾಗರಿಕರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹ ಪಡಿಸಿದರು. ಇದೇ ವೇಳೆ  ಉಪತಹಶೀಲ್ದಾರ್ ರವೀಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

    “ಕೇಂದ್ರ ಸರ್ಕಾರ ಪ್ರತಿಭಟನಾ ಸ್ಥಳಕ್ಕೆ ಹೋಗಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಬದಲಾಗಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗಿದೆ. ವಾಂಗ್‌ಚುಕ್ ಅವರು ನೀಟ್ ಪರೀಕ್ಷೆ ಅಕ್ರಮ ಹಾಗೂ 32 ವಿದ್ಯಾರ್ಥಿಗಳ ಸಾವಿನ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೇ ಹೊರತು ಅವರು ಯಾವುದೇ ವೈಯಕ್ತಿಕ ಹಿತಾಸಕ್ತಿಯಿಂದ ಹೋರಾಟ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಪ್ರಜಾ ಪ್ರಭುತ್ವ ಆಡಳಿತ ನಡೆಸುತ್ತಿದೆಯೆ ಅಥವಾ ರಾಜವಂಶಸ್ಥರ ರೀತಿ ಆಡಳಿತ ನಡೆಸುತ್ತಿದೆಯೆ?”

    — ಹೆಚ್.ಜಿ.ರಮೇಶ್, ರಾಜ್ಯಾಧ್ಯಕ್ಷರು, ರಾಜ್ಯ ಮಾಹಿತಿ ಹಕ್ಕು, ಸಾಮಾಜಿಕ ಕಾರ್ಯಕರ್ತರ ವೇದಿಕೆ.

    ಪ್ರತಿಭಟನೆಯಲ್ಲಿ ವೇದಿಕೆಯ ಶಿವಮೊಗ್ಗ ಜಿಲ್ಲೆಯ ವೆಂಕಟೇಶ್, ಪ್ರಭಾಕರ್ ಹೊಸಬಾಳೆ, ದಿನೇಶ್, ಗೀತಾ, ಗಾಯತ್ರಿ, ಹೆಚ್.ಡಿ.ಕೃಷ್ಣ, ದಿವಾಕರ್, ಲಕ್ಷ್ಮಿ ಹಾಗೂ ಹೇಮಂತ್‌ಕುಮಾರ್, ದೀಪಕ್, ಹೆಚ್.ಸಿ.ರವಿಚಂದ್ರ, ನರಸೇಗೌಡ, ರಾಜು, ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಕೊರಟಗೆರೆ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಬೇಕಿತ್ತು. ಆದರೆ, ಆಶ್ಚರ್ಯವೆಂಬಂತೆ ಮಳೆಗಾಲದಲ್ಲೇ ಕೊರಟಗೆರೆ ಪುರಸಭೆ ವ್ಯಾಪ್ತಿಯ…

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.