ತುಮಕೂರು: ಗಾಂಜಾ ಸಾಗಣೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಲ್ಲಯ್ಯ ಎಂಬುವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಕಠಿಣ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು.
ಏನಿದು ಪ್ರಕರಣ: 2019ರ ನವೆಂಬರ್ 29 ರಂದು ಅಬಕಾರಿ ಪೊಲೀಸರು ಗಾಂಜಾ ಸಾಗಣೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ತಿಪಟೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ದುಪ್ಪಟ್ಟೆ ಮಲ್ಲಯ್ಯ ಅವರನ್ನು ಬಂಧಿಸಿದ್ದರು.
ಈ ವೇಳೆ 15.430 ಕೆ.ಜಿ. ಗಾಂಜಾ ಪತ್ತೆಯಾಗಿತ್ತು.
ಅಬಕಾರಿ ಡಿವೈಎಸ್ಪಿ ವಿಜಯಕುಮಾರ್ ಜಿ.ವಿ. ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದು ನ್ಯಾಯಾಧೀಶರಾದ ಜಯಂತ್ ಕುಮಾರ್ ಅವರು ಮೇಲ್ಕಂಡಂತೆ ತೀರ್ಪು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


