nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ್ ಜೀವನ್ ಮಿಷನ್: ಸಮುದಾಯದವರು ಸಕ್ರಿಯವಾಗಿ ಪಾಲ್ಗೊಳ್ಳಿ
    ತುರುವೇಕೆರೆ March 5, 2022

    ಜಲ್ ಜೀವನ್ ಮಿಷನ್: ಸಮುದಾಯದವರು ಸಕ್ರಿಯವಾಗಿ ಪಾಲ್ಗೊಳ್ಳಿ

    By adminMarch 5, 2022No Comments2 Mins Read

    Provided by
    Provided by

    ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ್ ಜೀವನ್ ಮಿಷನ್ ಯೋಜನೆಯು ಆಯಾ ಗ್ರಾಮಗಳಲ್ಲಿ ಅನುಷ್ಠಾನವಾಗಬೇಕಾದರೆ ಸಮುದಾಯವು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತುರುವೇಕೆರೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅವರು ತಿಳಿಸಿದರು.

    ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಸ್ನೇಹ ಜೀವನ ಫೌಂಡೇಶನ್(ರಿ) ಗುಬ್ಬಿ ಇವರ ಸಂಯುಕ್ತಾಶ್ರಯದಲ್ಲಿಂದು ತುರುವೇಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಗ್ರಾಮೀಣ ಭಾಗದ ಪ್ರತಿ ಮನೆಗೂ ನಳ ಸಂಪರ್ಕ ಒದಗಿಸಿ ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧವಾದ ನೀರನ್ನು ಒದಗಿಸುವುದು ಜಲ ಜೀವನ್ ಮಿಷನ್ ಯೋಜನೆಯ ಪ್ರಮುಖ ಉದ್ದೇಶ. ಅಲ್ಲದೇ ಸರ್ಕಾರದ ಹಲವಾರು ಯೋಜನೆಗಳು ನೀರು ಮತ್ತು ನೈರ್ಮಲ್ಯದ ವಿಚಾರವಾಗಿ ಕಾರ್ಯನಿರ್ವಹಿಸುತ್ತಿವೆ. ನೀರು ಅತ್ಯಮೂಲ್ಯವಾದುದ್ದು, ಪ್ರತಿಯೊಂದು ಹನಿ ನೀರನ್ನು ನಾವು ಶೇಖರಣೆ ಮಾಡಬೇಕು. ಅದಕ್ಕಾಗಿಯೇ ಪ್ರತಿಯೊಂದು ಮನೆಯಲ್ಲಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಂಡರೆ ಮುಂದಿನ ಪೀಳಿಗೆ ನೀರನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸಬಹುದು. ಸರ್ಕಾರದ ಯೋಜನೆಯ ಬಗ್ಗೆ ನಾವೆಲ್ಲರೂ ಸರಿಯಾದ ಮಾಹಿತಿಯನ್ನು ತಿಳಿಸದಾಗ ಮಾತ್ರ ಯೋಜನೆ ಯಶಸ್ವಿಯಾಗುತ್ತದೆ. ಜೊತೆಗೆ ಪ್ರತಿ ಮನೆಯಲ್ಲಿ ಮಳೆ ನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

    ಕಿರಿಯ ಅಭಿಯಂತರರಾದ ರವಿಕುಮಾರ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಬರಬಹುದಾದ ತಾಂತ್ರಿಕ ಅಂಶಗಳನ್ನು ಕುರಿತು ಸಂಪೂರ್ಣವಾಗಿ ತಿಳಿಸಿದರಲ್ಲದೇ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಹಾಗೂ ಗ್ರಾಮ ಕ್ರಿಯಾ ಯೋಜನೆ ಸಿದ್ಧಪಡಿಸಲು ಅವಶ್ಯಕವಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಕಾಮಗಾರಿಗೆ ಪ್ರತಿಯೊಬ್ಬರೂ ಕೈ ಜೋಡಿಸಿದಾಗ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳುತ್ತವೆ ಎಂದರು.
    ಸಂಪನ್ಮೂಲ ವ್ಯಕ್ತಿ ಉಮೇಶ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಕಾರ್ಯಕ್ರಮ ಅನುಷ್ಠಾನ ಹಂತದಲ್ಲಿ ಗ್ರಾಮ ಪಂಚಾಯಿತಿ ಮತ್ತು ಚುನಾಯಿತ ಸದಸ್ಯರುಗಳ ಪಾತ್ರ ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.


    Provided by
    Provided by

    ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರುಣ್‌ಕುಮಾರ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆ ಗುರಿ ಮತ್ತು ಉದ್ದೇಶಗಳ ಬಗ್ಗೆ ಕುರಿತು ಹಾಗೂ ಪ್ರಸ್ತುತ ಅನುಷ್ಠಾನವಾಗುತ್ತಿರುವ ಗ್ರಾಮಗಳಲ್ಲಿ ಕಾಮಗಾರಿ ಗುಣಮಟ್ಟ ಪರಿಶೀಲನೆ ಮತ್ತು ಮೇಲ್ವಿಚಾರಣೆ ಬಗ್ಗೆ ಮಾಹಿತಿ ನೀಡಿದರು.
    ಕಾರ್ಯಾಗಾರದಲ್ಲಿ ತುರುವೇಕೆರೆ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾದ ಸುಭಾಷ್ ಚಂದ್ರ, ಎಲ್ಲಾ ಗ್ರಾ.ಪಂ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅನುಷ್ಠಾ ಬೆಂಬಲ ಸಂಸ್ಥೆಯ ಕಿರಣ್, ಗೋವರ್ಧನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ.

     

    admin
    • Website

    Related Posts

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.