ತುಮಕೂರು: ನಗರದ ಅರ್ಬನ್ ರೆಸಾರ್ಟ್ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧಿಕಾರಿ ವೃಂದದವರಿಗೆ ಜರುಗಿದ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಹಕಾರ ಸಚಿವ, ಶಾಸಕ ಹಾಗೂ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸಹಕಾರ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ತರಬೇತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸುತ್ತಿರುವ ಜಿಲ್ಲಾ ಸಹಕಾರ ಯೂನಿಯನ್ ನ್ನು ಶ್ಲಾಘಿಸಿದರು.
ತರಬೇತಿಯಲ್ಲಿ ತಿಳಿಸುವಂತಹ ವಿಷಯಗಳು ತುಂಬಾ ಮುಖ್ಯವಾಗಿದ್ದು, ಸಾಲ ಮರುಪಾವತಿಯ ಪ್ರಕ್ರಿಯೆಗಳ ವಿನೂತನ ವಿಚಾರಗಳ ಬಗ್ಗೆ ತಿಳಿದುಕೊಂಡು ಬ್ಯಾಂಕಿನ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸುತ್ತಾ, ಸಹಕಾರ ಕಾನೂನುಗಳ ಅರಿವು, ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕವಾಗಿದ್ದು, ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸೇವೆಯನ್ನು ಒದಗಿಸುವುದು ಬಹುಮುಖ್ಯವಾಗಿದ್ದು, ರೈತರ ಯೋಗಕ್ಷೇಮದ ನಿಟ್ಟಿನಲ್ಲಿ ಸ್ಥಳೀಯ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಗ್ರಾಹಕರೊಂದಿಗೆ ಸೌಹಾರ್ದಯುತವಾಗಿ, ವಿಶ್ವಾಸದಿಂದ ವ್ಯವಹಾರಿಸಬೇಕೆಂದರು.
ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನಿನ ರೀತ್ಯಾ ಕಾರ್ಯನಿರ್ವಹಿಸಬೇಕೆಂದು ಕರೆನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಎನ್. ಗಂಗಣ್ಣ, ತುಮಕೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬಿ.ಜಿ.ವೆಂಕಟೇಗೌಡರು ಉಪನ್ಯಾಸಕರಾದ ಡಾ. ಗುರುಸ್ವಾಮಿ ಹಾಗೂ ವೆಂಕಟಸ್ವಾಮಿಯವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


