ಬೀದರ್: ಜೈ ಕರ್ನಾಟಕ ರಕ್ಷಣಾ ವೇದಿಕೆಯ (ಜೈ ಕರವೇ) ಬೀದರ್ ಜಿಲ್ಲಾ ವೈದ್ಯಕೀಯ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ದರಗೊಂಡ ಉದಯಸಿಂಗ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷರ ನಿರ್ದೇಶನದಂತೆ ಸಂಘಟನೆಯ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಗೌರವಾಧ್ಯಕ್ಷರು, ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
“ಡಾ. ದರಗೊಂಡ ಉದಯಸಿಂಗ್ ಅವರ ಸಾಮಾಜಿಕ ಕಳಕಳಿ, ಸಂಘಟನಾ ಸಾಮರ್ಥ್ಯ ಹಾಗೂ ನಿರಂತರ ಸೇವಾಮನೋಭಾವವನ್ನು ಗುರುತಿಸಿ ಈ ಜವಾಬ್ದಾರಿಯನ್ನು ವಹಿಸಲಾಗಿದೆ.”
— ರಮೇಶ್ ಮರ್ಜಾಪುರ, ಜಿಲ್ಲಾಧ್ಯಕ್ಷರು, ಜೈ ಕರವೇ
ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಉಪಾಧ್ಯಕ್ಷ ಮೊಹಸಿನ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತುಕಾರಾಮ ಚಿದ್ರಿ, ನಗರ ಕಾರ್ಮಿಕ ಘಟಕದ ಅಧ್ಯಕ್ಷ ಸಿಜಾವುದ್ದೀನ್ ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


