ನವದೆಹಲಿ: ನೀಟ್–ಯುಜಿ 2026 (NEET-UG 2026) ಪರೀಕ್ಷಾ ವಿವಾದ ಹಾಗೂ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ‘X’ ನಲ್ಲಿ ಪ್ರಕಟಿಸಿರುವ ಎರಡು ಪುಟಗಳ ಸುದೀರ್ಘ ಪತ್ರದಲ್ಲಿ, ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವುದಾಗಿ ತಿಳಿಸಿದ್ದಾರೆ.
ನೈತಿಕ ಹೊಣೆ: “ನೀಟ್–ಯುಜಿ ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ನಾನು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ” ಎಂದು ಪ್ರಧಾನ್ ಹೇಳಿದ್ದಾರೆ.
ಮೇ 3, 2026ರಂದು ನಡೆದ ಪರೀಕ್ಷೆಯಲ್ಲಿ ಅಕ್ರಮಗಳು ಕಂಡುಬಂದ ತಕ್ಷಣವೇ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಮರುಪರೀಕ್ಷೆ ನಡೆಸಿ ಜುಲೈ 16ರಂದು ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಜೊತೆಗೆ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ವಿದ್ಯಾರ್ಥಿಗಳ ಹಿತಾಸಕ್ತಿ: ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ದೇಶವಿರೋಧಿ ಶಕ್ತಿಗಳು ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು ಹಾಗೂ ವಿದ್ಯಾರ್ಥಿಗಳ ಭವಿಷ್ಯ ಕಾನೂನು ಹೋರಾಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


