ಸರಗೂರು / ಮೈಸೂರು: ಅಮ್ಮ ವಸುಂಧರೆ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಮೈಸೂರಿನ ಜೆ.ಎಲ್.ಬಿ ರೋಟರಿ ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಸರಗೂರು ತಾಲೂಕಿನ ಹಾದನೂರು ಗ್ರಾಮದ ಜಾಕಿ ಪ್ರತಾಪ್ ಎಸ್. ಅವರಿಗೆ ಅವರ ವಿವಿಧ ಸಾಧನೆಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಹಾದನೂರಿನ ಸೋಮಯ್ಯ ಹಾಗೂ ಪುಟ್ಟಲಕ್ಷ್ಮಮ್ಮ ದಂಪತಿಯ ಕಿರಿಯ ಪುತ್ರ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜಾಕಿ ಪ್ರತಾಪ್, “ನಾನು ಕಾಡಂಚಿನ ಭಾಗದ ಹಾದನೂರು ಗ್ರಾಮದಲ್ಲಿ ಬೆಳೆದು, ಮುಂದಿನ ವಿದ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬಂದೆ. ಜೀವನದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಾ ಸಾಗಿಬಂದ ನನಗೆ ಇಂದು ಈ ಪ್ರಶಸ್ತಿ ದೊರೆತಿರುವುದು ಅತ್ಯಂತ ಸಂತೋಷ ತಂದಿದೆ. ಈ ಗೌರವ ನನ್ನೊಬ್ಬನದ್ದಲ್ಲ; ನನ್ನ ಕುಟುಂಬ, ಗುರುಗಳು, ಸ್ನೇಹಿತರು ಹಾಗೂ ಪ್ರೋತ್ಸಾಹಿಸಿದ ಎಲ್ಲರಿಗೂ ಸಲ್ಲುತ್ತದೆ. ಈ ಪ್ರಶಸ್ತಿಯು ನನಗೆ ಇನ್ನಷ್ಟು ಜವಾಬ್ದಾರಿಯಿಂದ ಸಮಾಜಮುಖಿ ಕಾರ್ಯಗಳನ್ನು ಮಾಡಲು ಪ್ರೇರಣೆ ನೀಡಿದೆ ಎಂದರು.
“ನನ್ನ ಸಾಧನೆಯನ್ನು ಗುರುತಿಸಿ ಗೌರವಿಸಿದ ‘ಅಮ್ಮ ವಸುಂಧರೆ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್’ ಪದಾಧಿಕಾರಿಗಳಿಗೆ ನಾನು ಯಾವಾಗಲೂ ಚಿರಋಣಿಯಾಗಿರುತ್ತೇನೆ” ಎಂದರು.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಗಣ್ಯ ಅತಿಥಿಗಳು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಪ್ರಶಸ್ತಿ ಪುರಸ್ಕೃತರಿಗೆ ಶುಭ ಹಾರೈಸಿ ಅಭಿನಂದಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


