ತುಮಕೂರು: ಅಕ್ಷಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರಿನ ತರಬೇತಿ ಮತ್ತು ಉದ್ಯೋಗ ವಿಭಾಗದ ವತಿಯಿಂದ ಕ್ರಾಸ್ ಕಲ್ಚರ್ ವರ್ಕ್ಶಾಪ್ ಭಾರತ ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಜುಲೈ 28, 2026ರಂದು ಬೆಳಿಗ್ಗೆ 9.30 ಗಂಟೆಯಿಂದ ಕಾಲೇಜಿನ ರಾಧಾ-ಕೃಷ್ಣ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರದ ಉದ್ದೇಶ ಭಾರತ ಮತ್ತು ಜಪಾನ್ ದೇಶಗಳ ಸಂಸ್ಕೃತಿ, ಸಂಪ್ರದಾಯ, ಕೆಲಸದ ಸಂಸ್ಕೃತಿ, ಶಿಸ್ತು, ವೃತ್ತಿಪರತೆ ಹಾಗೂ ಉದ್ಯೋಗ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವುದಾಗಿದೆ. ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಸಾಮರ್ಥ್ಯ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ.
ಕಾರ್ಯಕ್ರಮದಲ್ಲಿ ಎಸ್ಸಿಬಿಐ, ತುಮಕೂರಿನ ನಿರ್ದೇಶಕರಾದ ಜುನಿಚಿ ಕಾಮಿಯಾಮಾ ಹಾಗೂ ರಿಯೋಸುಕೆ ಕುಬೋಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರವೀಣ್ ಟಿ. ಎಸ್., ಮ್ಯಾನೇಜರ್ (ಫೈನಾನ್ಸ್ , ಅಡ್ಮಿನ್ ಮತ್ತು ಹೆಚ್ಆರ್), ಎಸ್ಸಿಬಿಐ, ತುಮಕೂರು ಅವರು ವಿಶೇಷ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಎಜುಕೇಶನ್ ಟ್ರಸ್ಟ್ನ ಗೌರವಾಧ್ಯಕ್ಷರಾದ ಡಾ. ಶಿವಕುಮಾರ್ ಕೆ. ಎಸ್. ವಹಿಸಲಿದ್ದು, ವ್ಯವಸ್ಥಾಪಕ ಟ್ರಸ್ಟಿ ಡಾ. ಶೋಭಾ ಎಸ್. ಅವರು ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಕ್ರಮದ ನೇತೃತ್ವವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಯತೀಶ್ ಎಲ್., ತರಬೇತಿ ಮತ್ತು ಉದ್ಯೋಗಾಧಿಕಾರಿ ಪ್ರೊ. ರಾಕೇಶ್ ಎಸ್. ಹಾಗೂ ಸಹಾಯಕ ತರಬೇತಿ ಮತ್ತು ಉದ್ಯೋಗಾಧಿಕಾರಿ ಪ್ರೊ. ಅಶ್ವಿನಿ ಸಿಂಗ್ ಎಸ್. ವಹಿಸಲಿದ್ದಾರೆ. ಕಾಲೇಜಿನ ಪ್ಲೇಸ್ಮೆಂಟ್ ಸಂಯೋಜಕರು ಕಾರ್ಯಕ್ರಮವನ್ನು ಸಂಯೋಜಿಸಲಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಈ ಅಪರೂಪದ ಭಾರತ ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾಗತಿಕ ವೃತ್ತಿ ಅವಕಾಶಗಳು ಮತ್ತು ಅಂತರರಾಷ್ಟ್ರೀಯ ಕಾರ್ಯಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳುವಂತೆ ಕಾಲೇಜು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
