ಸರಗೂರು: ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆಯ ವಿವಿಧ ಜಿಲ್ಲಾ ಹಾಗೂ ರಾಜ್ಯ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ನೇಮಕಾತಿಯನ್ನು ಪ್ರಕಟಿಸಲಾಗಿದ್ದು, ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು ಹಾಗೂ ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮಹತ್ವದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ರಾಜ್ಯ ಉಪಾಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ಮಾತನಾಡಿದ ಎಂ. ದಾಸಪ್ಪ ಆಗತ್ತೂರು, “ನನ್ನ ಮೇಲೆ ಭರವಸೆಯಿಟ್ಟು ಈ ಪ್ರಮುಖ ಜವಾಬ್ದಾರಿಯನ್ನು ಹಸ್ತಾಂತರಿಸಿದ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು, ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಹಾಗೂ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದರು.
ಮುಂದುವರಿದು ಮಾತನಾಡಿದ ಅವರು, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಮಾಜದ ಸರ್ವಾಂಗೀಣ ಹಿತರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
