ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗೌರವಾನ್ವಿತ ‘ಕನ್ನಡ ಜಂಗಮ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಭಾಜನರಾಗಿದ್ದಾರೆ.
ನಾಡೋಜ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು ಅವರ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜೂನ್ 29ರಂದು ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
