nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    ಎಂಕೆಪಿ ಬಾರ್ ಮಾಲೀಕರು, ಪಿಡಿಒ ಹಾಗೂ ಜಮೀನಿನ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು | ವರ್ತಕರಿಂದ ಅಂಗಡಿ-ಮುಗ್ಗಟ್ಟು ಬಂದ್
    By Ganesh TumkuruJuly 28, 2026No Comments2 Mins Read
    itna grama

    ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಚಿಕ್ಕದೇವಮ್ಮನ ಸನ್ನಿಧಿ ಹಾಲುಗಡ ಸಮೀಪದ ಗಣೇಶನ ಗುಡಿ ವೃತ್ತದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಎಂಕೆಪಿ ಬಾರ್’ ಅನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ನಾಯಕ ಸಮಾಜ, ಇಟ್ನ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ತಾಲೂಕು ಆಡಳಿತದ ವಿರುದ್ಧ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಪಟ್ಟಣದ ವರ್ತಕರು ತಮ್ಮ ಅಂಗಡಿ–ಮುಗ್ಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಸಾಥ್ ನೀಡಿದರು.

    ಸಂತೆಮಾಸ್ತಮ್ಮ ದೇವಸ್ಥಾನದ ಮುಂಭಾಗದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಒಂದನೇ ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ತಾಲೂಕು ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿವಿಧ ಘೋಷಣೆಗಳನ್ನು ಕೂಗಿದ ನಂತರ ತಹಸೀಲ್ದಾರ್ ಕಚೇರಿ ಮುಂಭಾಗ ಧರಣಿ ಕುಳಿತರು.

    ‘ಸೇವ್ ಕಬಿನಿ’ ಸಂಘಟನೆಯ ಸದಸ್ಯ ಹಾಗೂ ವಕೀಲ ರವಿಕುಮಾರ್ ಮಾತನಾಡಿ, “ಚಿಕ್ಕದೇವಮ್ಮನ ಹಾಲುಗಡ ಹಾಗೂ ಗಣೇಶ ಗುಡಿ ಪ್ರದೇಶವು ಧಾರ್ಮಿಕ ಪ್ರಾಮುಖ್ಯತೆ ಹೊಂದಿದ್ದು, ಸಾರ್ವಜನಿಕರು ಹಾಗೂ ಭಕ್ತಾದಿಗಳು ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಇಂತಹ ಸ್ಥಳದಲ್ಲಿ ಬಾರ್ ತೆರೆದಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ. ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿದ್ದು, ತಕ್ಷಣವೇ ಬಾರ್ ಪರವಾನಗಿಯನ್ನು ರದ್ದುಪಡಿಸಿ ಶಾಶ್ವತವಾಗಿ ಸ್ಥಳಾಂತರಿಸಬೇಕು. ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದರು.

    ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ರವಿ ಮಾತನಾಡಿ, “ಧಾರ್ಮಿಕ ಕ್ಷೇತ್ರ ಅಥವಾ ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಬಾರ್ ತೆರೆಯಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು” ಎಂದು ಭರವಸೆ ನೀಡಿದರು.

    ಸ್ಥಳದಲ್ಲೇ ಎಫ್‌ ಐಆರ್ (FIR) ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಾಗ, ಪೊಲೀಸ್ ಇಲಾಖೆಯು ಕೊತ್ತೇಗಾಲ ಪಿಡಿಒ, ಜಮೀನಿನ ಮಾಲೀಕ ಹಾಗೂ ಬಾರ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿತು.

    ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ತಹಶೀಲ್ದಾರ್ ಮೋಹನಕುಮಾರಿ, ಇಓ ಪ್ರೇಮ ಕುಮಾರ್, ಡಿವೈಎಸ್ಪಿ ರವಿ, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್‌ಐ ಆರ್. ಕಿರಣ್, ಜಿಪಂ ಮಾಜಿ ಸದಸ್ಯರಾದ ಚಿಕ್ಕವೀರನಾಯಕ, ಎಚ್.ಸಿ. ಲಕ್ಷ್ಮಣ್, ಉದ್ಯಮಿ ನಿಂಗರಾಜು, ಸರಗೂರು ಶಿವಣ್ಣ, ಮೊತ್ತ ಬಸವರಾಜಪ್ಪ, ಪುರಸಭೆ ಅಧ್ಯಕ್ಷ ಚಾಕಹಳ್ಳಿ ಕೃಷ್ಣ, ದೇವಸ್ಥಾನ ಸಮಿತಿ ಅಧ್ಯಕ್ಷ ದೊಡ್ಡವೀರನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ. ಗಿರೀಶ್ ಹಾಗೂ ವಿವಿಧ ಸಮಾಜಗಳ ಯಜಮಾನರು, ರೈತ ಮುಖಂಡರು ಮತ್ತು ನೂರಾರು ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು: ಮೂರು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಹಾಗೂ ಯುವ ಜನತೆಗೆ…

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.