nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026
    Facebook Twitter Instagram
    ಟ್ರೆಂಡಿಂಗ್
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    ಜಿಲ್ಲಾ ಸುದ್ದಿ July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    By Ganesh TumkuruJuly 29, 2026No Comments2 Mins Read
    saragur.jpg

    ಸರಗೂರು: 12ನೇ ಶತಮಾನದ ಆದ್ಯ ವಚನಕಾರ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೂ ಪೂರಕವಾಗಿದ್ದು, ಪ್ರತಿಯೊಬ್ಬರೂ ಅವರ ವಿಚಾರಧಾರೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮೋಹನಕುಮಾರಿ ಕರೆ ನೀಡಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

    ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿದ್ದ ಹಡಪದ ಅಪ್ಪಣ್ಣನವರು ತಮ್ಮ 200ಕ್ಕೂ ಹೆಚ್ಚು ವಚನಗಳ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದವರು. ಸಮಾನತೆ, ಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಮಾಜ ಸುಧಾರಕರಾದ ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಮಾನವ ಬದುಕು ಹಸನಾಗುತ್ತದೆ ಎಂದು ತಹಶೀಲ್ದಾರ್ ಬಣ್ಣಿಸಿದರು.

    ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಮುಖಂಡರು ತಾಲೂಕು ಮಟ್ಟದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಕೊರತೆ ಇರುವ ಬಗ್ಗೆ ತಹಸೀಲ್ದಾರ್ ಅವರ ಗಮನಕ್ಕೆ ತಂದರು.

    ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್ ಮೋಹನಕುಮಾರಿ, ಪಟ್ಟಣ ಹಾಗೂ ತಾಲೂಕಿನಲ್ಲಿ ಸರ್ಕಾರಿ ಜಾಗದ ಅಭಾವದಿಂದ ಈ ಸಮಸ್ಯೆ ಉಂಟಾಗಿದೆ. ಇತ್ತೀಚೆಗೆ ಹಂಚೀಪುರ ಗ್ರಾಮದ ಬಳಿ ಆಸ್ಪತ್ರೆ ಹಾಗೂ ಅಗ್ನಿಶಾಮಕ ದಳದ ಕಚೇರಿಗಾಗಿ ಜಾಗ ಗುರುತಿಸಲಾಗಿದೆ. ಉಳಿದಿರುವ ಸರ್ಕಾರಿ ಜಾಗವನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮುದಾಯ ಭವನಕ್ಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಲಪ್ಪ ಮಾತನಾಡಿ, “ಸಂಖ್ಯೆಯಲ್ಲಿ ಸಣ್ಣದಾದರೂ ಸಂಘಟಿತವಾಗಿ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ಸಮಾಜದ ಅಭಿವೃದ್ಧಿ ಸಾಧ್ಯ. ಹಡಪದ ಅಪ್ಪಣ್ಣರ ಸೇವಾ ಮನೋಭಾವ ಮತ್ತು ಶಿಕ್ಷಣದ ಮಹತ್ವವನ್ನು ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು” ಎಂದರು.

    ಇದೇ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿನಿಯರಾದ ದಿವ್ಯಾ ಮತ್ತು ಪಲ್ಲವಿ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಅಧ್ಯಕ್ಷ ನರಸಿಂಹ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರ ಸ್ವಾಮಿ, ಗೌರವಾಧ್ಯಕ್ಷ ದಡದಹಳ್ಳಿ ಶ್ರೀನಿವಾಸ, ಟೌನ್ ಅಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಜಿ. ಪ್ರಭಾಕರ್, ಯಜಮಾನರಾದ ಮುರಾರಿ, ಸಹ ಕಾರ್ಯದರ್ಶಿ ನಿಂಗರಾಜು, ಗಡಿ ಯಜಮಾನ ಚಂದ್ರಶೇಖರ, ಉಪಾಧ್ಯಕ್ಷ ಮುಳ್ಳೂರು ರವಿಕುಮಾರ್, ಖಜಾಂಚಿ ಕಾಳಶಟ್ಟಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಗುಣಧರ್, ಶಿರಸ್ತೇದಾರ್ ಮನೋಹರ್, ರಾಜಸ್ವ ನಿರೀಕ್ಷಕ ರವಿಚಂದ್ರನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮದಿಂದ ಕರ್ನಾಟಕದ 10 ಜಿಲ್ಲೆಗಳ ಜನರ…

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.