ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ವಿಷಯದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬಿ.ಎಡ್. ಶಿಕ್ಷಣ ಪಡೆದಿರಬೇಕು. ಗಣಕ ವಿಜ್ಞಾನ ವಿಷಯದ ಹುದ್ದೆಗೆ ಇಂಜಿನಿಯರಿಂಗ್, ಎಂ.ಸಿ.ಎ. ಅಥವಾ ಎಂ.ಎಸ್ಸಿ. ಕಂಪ್ಯೂಟರ್ ವಿಜ್ಞಾನ ಹೊಂದಿರಬೇಕು.
ಅರ್ಹ ಅಭ್ಯರ್ಥಿಗಳು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಜುಲೈ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ಡೆಮೋ ತರಗತಿಗೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರು ಜುಲೈ 31ರಂದು ನಡೆಯುವ ಡೆಮೋ ತರಗತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಯಾತ್ಸಂದ್ರ, ಮೈದಾಲ ರಸ್ತೆ, ಬಸವಪಟ್ಟಣ, ತುಮಕೂರು, ದೂ.ವಾ. ಸಂ. 0816-2278014ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
