nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    ಮಧುಗಿರಿ July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    By Ganesh TumkuruJuly 30, 2026No Comments2 Mins Read
    srjan

    ಮಧುಗಿರಿ: ಎಷ್ಟೇ ಬರಗಾಲ ಬಂದರೂ ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯಿಂದಾಗಿ ಊಟಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮಾಜಿ ಸಚಿವ ಶಾಸಕ ಕೆ.ಎನ್. ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

    ಅವರು ಎಂ.ಎನ್.ಕೆ ಸಮುದಾಯ ಭವನದಲ್ಲಿ ಬುಧವಾರ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನ್ ಸೃಜನ್ ಅಭಿಯಾನದಲ್ಲಿ ಮಾತನಾಡಿದರು.

    ಕ್ಷೇತ್ರದಲ್ಲಿ ಎಸ್‌ ಐ ಆರ್ ಮತದಾರರ ಪಟ್ಟಿ ಪರಿಷ್ಕರಣೆ ಶೇ. 80 ರಷ್ಟು ಪೂರ್ಣಗೊಂಡಿದೆ. ಬೇರೆ ಕಡೆಯಿಂದ ಮದುವೆಯಾಗಿ ಬಂದಿರುವವರು 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂಬ ನಿಯಮವಿದ್ದು, ಅವರ ಮಾವನ ಮತದಾರರ ಪಟ್ಟಿ ಆಧಾರದ ಮೇಲೆ ಎಸ್‌ ಐ ಆರ್‌ ಗೆ ಸೇರಿಸಬೇಕು ಎಂದು ಒತ್ತಾಯಿಸಿದ ಅವರು, ಒಂದೊಂದು ಮತವೂ ಅಮೂಲ್ಯ. ಬಾಕಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿ. ಯಾರೂ ಎಸ್‌ ಐ ಆರ್ ಪ್ರಕ್ರಿಯೆಯಲ್ಲಿ ಇನ್ನೂ ನೋಂದಣಿ ಮಾಡಿಕೊಂಡಿರುವುದಿಲ್ಲ ಅಂತಹವರ ಮನವೊಲಿಸಿ ಮತ ನಷ್ಟವಾಗದ ರೀತಿ ಕ್ರಮ ವಹಿಸಿ. ಮುಂದೆ ಪುರಸಭೆ, ಗ್ರಾ.ಪಂ, ಜಿಪಂ ಚುನಾವಣೆ ಬರಲಿದ್ದು, ಎಲ್ಲಾ ಮುಖಂಡರು, ಕಾರ್ಯಕರ್ತರು ಚುನಾವಣೆಗೆ ಸನ್ನದ್ಧರಾಗಬೇಕು.

    ಈ ವರ್ಷ ಬರಗಾಲದ ಮುನ್ಸೂಚನೆ ಕಂಡು ಬರುತ್ತಿದ್ದು, ಎಷ್ಟೇ ಬರಗಾಲ ಬಂದರೂ ಊಟಕ್ಕೆ ಯಾವುದೇ ತೊಂದರೆಯಾಗದಂತೆ ಸಿದ್ದರಾಮಯ್ಯನವರ ಅನ್ನಭಾಗ್ಯ ನೆರವಿಗೆ ಬರುತ್ತಿದೆ. ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗದಂತೆ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಏನು ಮಾಡಿದರೂ ಕಡಿಮೆಯೆ. ಬರ ಪರಿಸ್ಥಿತಿ ಹೀಗೆಯೆ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಗೋಶಾಲೆ ತೆರೆದು ಗೋಪಾಲಕರಿಗೆ ಊಟದ ವ್ಯವಸ್ಥೆ ಜೊತೆಗೆ ಅಗತ್ಯ ಬಿದ್ದರೆ ರಾತ್ರಿ ಗೋಶಾಲೆಯಲ್ಲೇ ಉಳಿದುಕೊಳ್ಳುವ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು.

    — ಕೆ.ಎನ್.ರಾಜಣ್ಣ, ಶಾಸಕರು.


    ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಗೆ ಸೈನ್ಸ್ ಪಿಯು ಕಾಲೇಜು ಮಂಜೂರಾಗಿದ್ದು, ಜಿಲ್ಲೆಯಲ್ಲಿ ಎಲ್ಲೂ ಸಹ ಸೈನ್ಸ್ ಪಿಯು ಕಾಲೇಜು ಈಗ ಮಂಜೂರಾಗಿಲ್ಲ. 74 ಕೋಟಿ ರೂ. ವೆಚ್ಚದಲ್ಲಿ ಜಿಟಿಟಿಸಿ ಕಾಲೇಜು ಮಂಜೂರು ಮಾಡಲಾಗಿದ್ದು, ಕಾಮಗಾರಿ ನಡೆಯುತ್ತಿದೆ. ಯೂನಿಟ್ ಕಾಸ್ಟ್ ಕಡಿಮೆ ಇದೆ ಎಂದು ಯಾರೂ ಸಹ ಮನೆ ಕಟ್ಟಲು ಮುಂದೆ ಬರುತ್ತಿಲ್ಲ. ಯೂನಿಟ್ ಕಾಸ್ಟ್ ಹೆಚ್ಚಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದರು.

    ಹಳ್ಳಿಗಳಲ್ಲಿ ಪವತಿ ಖಾತೆ, ಪಿಂಚಣಿ ಸೌಲಭ್ಯ ಸೇರಿದಂತೆ ಬಡವರ ಸಮಸ್ಯೆಗಳು ಬಹಳಷ್ಟಿದ್ದು, ಅವರ ಸಮಸ್ಯೆಗೆ ಸ್ಪಂದಿಸಿ, ಯಾರು ಜನರ ಸೇವೆ ಮಾಡಿ ಅವರ ಪ್ರೀತಿ ವಿಶ್ವಾಸ ಗಳಿಸುತ್ತಾರೋ ಅವರಿಗೆ ಜನ ಬೆಂಬಲವೂ ಹೆಚ್ಚಾಗಿರುತ್ತದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅವಧಿಯಲ್ಲಿ ಅವರ ಹೆಸರೇಳಿಕೊಂಡು ನಾಯಕರು ಗೆಲ್ಲುತ್ತಿದ್ದರು. ಆದರೆ ಇಂದು ಅಂತಹ ಪರಿಸ್ಥಿತಿ ಇಲ್ಲ. ಯಾರು ಜನರ ಪ್ರೀತಿ ವಿಶ್ವಾಸ ಗಳಿಸುತ್ತಾರೋ, ಅವರಿಗೆ ಜನ ಬೆಂಬಲ ಇರುತ್ತದೆ. ರಾಜಕಾರಣದಲ್ಲಿ ಅನುಭವದಿಂದ ಹೆಚ್ಚು ಪಾಠ ಕಲಿಯಬಹುದು. ನಿಮ್ಮಲ್ಲಿ ನಾವು ಎಂಬ ಮನೋಭಾವ ರಾಜಕಾರಣದಲ್ಲಿ ಬಂದಾಗ ಯಶಸ್ಸು ಸಾಧ್ಯ ಎಂದು ಮುಖಂಡರಿಗೆ, ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಕೆಪಿಸಿಸಿ ವೀಕ್ಷಕ ಎಂ.ಸಿ. ವೇಣುಗೋಪಾಲ್, ಜಿ.ಪಂ ಮಾಜಿ ಅಧ್ಯಕ್ಷ ಕೆ.ಜಿ. ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಗೋಪಾಲಯ್ಯ, ಆದಿ ನಾರಾಯಣರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷರುಗಳಾದವ ಮಹಮ್ಮದ್ ಆಯೂಬ್, ಎಂ.ಕೆ. ನಂಜುಂಡಯ್ಯ, ಜಿ.ಪಂ. ಮಾಜಿ ಸದಸ್ಯರಾದ ಚೌಡಪ್ಪ, ಚಿನ್ನಪ್ಪ, ಮುಖಂಡರಾದ ತುಂಗೋಟಿ ರಾಮಣ್ಣ, ನಿಖಿತ್ ರಾಜ್ ಮಾರ್ಯ, ಸಿದ್ದಗಂಗಪ್ಪ, ಪ್ರಮೀಳಮ್ಮ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ತಾ.ಪಂ. ಮಾಜಿ ಅಧ್ಯಕ್ಷೆ ಇಂದಿರಾ ದೇಣಾ ನಾಯ್ಕ, ಮಾಜಿ ಸದಸ್ಯೆ ಸುವರ್ಣಮ್ಮ ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು…

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.