ಬೀದರ್ / ಔರಾದ್: ನೆರೆಯ ರಾಜ್ಯಗಳಿಂದ ಗಡಿ ಚೆಕ್ ಪೋಸ್ಟ್ ಗಳ ಮೂಲಕ ನಡೆಯುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವೆ ಅವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
ಬುಧವಾರ ಔರಾದ್ ತಾಲೂಕಿನ ‘ಬಾರ್ಡರ್ ತಾಂಡಾ’ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸ್ಥಳದಲ್ಲಿದ್ದ ಭದ್ರತಾ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಪ್ರಮುಖ ಸೂಚನೆಗಳನ್ನು ನೀಡಿದರು. ನೆರೆ ರಾಜ್ಯಗಳಿಂದ ಕಾನೂನುಬಾಹಿರ ವಸ್ತುಗಳ ರವಾನೆ ಅಥವಾ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯಲು ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸದಾ ಜಾಗರೂಕರಾಗಿರಬೇಕು ಹಾಗೂ ವಾಹನಗಳ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಅವರು ತಿಳಿಸಿದರು.
ಈ ಭೇಟಿಯ ಸಂದರ್ಭದಲ್ಲಿ ಪಿಎಸ್‌ಐ ದಿನೇಶ ಎಂ.ಟಿ., ಶರಣಪ್ಪ ಹುಣಸೆ, ಸುಭಾಷ ಲಕ್ಕೆ, ದತ್ತು ನರೋಟೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
