nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    ತುಮಕೂರು July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    By Ganesh TumkuruJuly 31, 2026No Comments1 Min Read

    ತುಮಕೂರು: ನಗರದ ಹನುಮಂತಪುರದಲ್ಲಿ ಪೇಟೆ ಮಾತೆ ಕೊಲ್ಲಾಪುರದಮ್ಮ ಹಾಗೂ ಕರುಗಳಮ್ಮ ದೇವರ ಐದು ದಿನಗಳ ಜಾತ್ರಾಮಹೋತ್ಸವ ಏರ್ಪಾಡಾಗಿದೆ. ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ಶ್ರೀರಾಮನಗರದ ಆದಿಸ್ಥಾನ ಮುದ್ರೆಗೋಣೇಮರದ ಪೂಜೆ, ಮಧ್ಯಾಹ್ನ 3 ಗಂಟೆಗೆ ಕೋಟೆ ಕೊಲ್ಲಾಪುರದಮ್ಮ ಹಾಗೂ ಕರುಗಳಮ್ಮ ದೇವಸ್ಥಾನದಿಂದ ದೇವರುಗಳನ್ನು ಮಂಗಳವಾದ್ಯ, ಜಾನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಹನುಮಂತಪುರ ದೇವಸ್ಥಾನಕ್ಕೆ ಕರೆತರಲಾಗುವುದು.

    ನಂತರ ನಡೆಯುವ ಸಮಾರಂಭದಲ್ಲಿ ತಿಪಟೂರು ತಾಲೂಕು ಆಳುಬುರುಕ್ಷೇತ್ರದ ಸೋಮಶೇಖರ ಸ್ವಾಮೀಜಿ ಸಾನಿಧ್ಯವಹಿಸುವರು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರೆ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಎಸ್.ಆರ್.ಶ್ರೀನಿವಾಸ್, ಪ್ರಜಾಪ್ರಗತಿ ಸಂಪಾದಕ ಡಾ.ಎಸ್‌, ನಾಗಣ್ಣ ಅತಿಥಿಗಳಾಗಿ ಭಾಗವಹಿಸುವರು.

    ಆಗಸ್ಟ್ 4ರಂದು ಸಂಜೆ 5 ಗಂಟೆಗೆ ಆರತಿಅಗ್ನಿಕೊಂಡವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಉದ್ಘಾಟಿಸುವರು. ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್‌ ಗೌಡ, ಮಾಜಿ ಶಾಸಕ ಹೆಚ್.ನಿಂಗಪ್ಪ ಭಾಗವಹಿಸುವರು. ಇದೇ ದಿನ ಸಂಜೆ 6 ಗಂಟೆಗೆ ಕಂಬದರಂಗಯ್ಯ ಮತ್ತು ತಂಡದವರಿಂದ ಸಂಗೀತ ಸಂಜೆ ಏರ್ಪಾಡಾಗಿದೆ. ಆ. 4ರಂದು ಸಂಜೆ 5 ಗಂಟೆಗೆ ದೇವರುಗಳಿಗೆ ಆರತಿ ಇದೆ. ಆಕರ್ಷಕವಾಗಿ ಆರತಿಯನ್ನು ಅಲಂಕರಿಸಿ ತರುವವರಿಗೆ ಬಹುಮಾನ ನೀಡಲಾಗುವುದು ಎಂದು ತಿಗಳ ಸಮಾಜದ ಹಿರಿಯರಾದ ಟಿ.ಎಲ್. ಕುಂಭಯ್ಯ ತಿಳಿಸಿದ್ದಾರೆ.

    ಆ.5ರಂದು ಮಧ್ಯಾಹ್ನ 2 ಗಂಟೆಗೆ ಬಿ.ಎ. ಗುಡಿಪಾಳ್ಯದ ಬಯಲು ಆಂಜನೇಯ ಸ್ವಾಮಿದೇವಸ್ಥಾನದ ಬಳಿ ಶ್ರೀ ಬಯಲು ಆಂಜನೇಯ ಕಲಾ ಟ್ರಸ್ಟ್ ಕಲಾವಿದರಿಂದ ಕುರುಕ್ಷೇತ್ರ ನಾಟಕ ಹಾಗೂ 6ರಂದು ಇದೇ ಟ್ರಸ್ಟ್‌ನಿಂದ ಇದೇ ಜಾಗದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಿದೆ.

    ಆಗಸ್ಟ್ 7ರಂದು ಕೊಲ್ಲಾಪುರದಮ್ಮ, ಕರುಗಳಮ್ಮ ದೇವರಿಗೆ ಮಡಲಕ್ಕಿ ಪೂಜೆರಾತ್ರಿ 8 ಗಂಟೆಗೆ ಎಲ್ಲೇಕಲ್ಲಿನ ಬಳಿ ಅಮ್ಮನವರ ಪೂಜಾ ಕಾರ್ಯಕ್ರಮ ಹಾಗೂ ಶ್ರೀರಾಮನಗರ ದೇವಸ್ಥಾನದವರೆಗೆ ದೇವರ ಮೆರವಣಿಗೆ ಮೂಲಕ ಕರೆದೊಯ್ಯಲಾಗುವುದು ಎಂದು ಟಿ.ಎಲ್. ಕುಂಭಯ್ಯ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.