ಸರಗೂರು: ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು.
ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿ ತಾಯಿ ಚಿಕ್ಕದೇವಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ತಾಯಿಗೆ ಅಭಿಷೇಕ, ವಿಶೇಷ ಅಲಂಕಾರ, ಅರ್ಚನೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ನಂತರ ತಾಯಿ ಚಿಕ್ಕದೇವಮ್ಮನ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಭಕ್ತಿಭಾವದಿಂದ ಮೆರವಣಿಗೆ ನಡೆಸಲಾಯಿತು. ಈ ವೇಳೆ ಭಕ್ತರು ಜಯಘೋಷ ಮೊಳಗಿಸಿ ದೇವಿಯ ಕೃಪೆಗೆ ಪಾತ್ರರಾದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿ. ಮಟಕರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಶೇಖರ ಅವರು ತಮ್ಮ ಕುಟುಂಬ ಸಮೇತ ಹಾಗೂ ಸ್ನೇಹಿತರೊಂದಿಗೆ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಭಕ್ತರು ಪ್ರಸಾದ ಸ್ವೀಕರಿಸಿ ಧನ್ಯತಾಭಾವ ಮೆರಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿ ಡಾ.ಚಂದ್ರಶೇಖರ ಅವರು, “ಆಷಾಢ ಶುಕ್ರವಾರದಂದು ತಾಯಿ ಚಿಕ್ಕದೇವಮ್ಮನ ದರ್ಶನ ಪಡೆಯುವುದು ನಮ್ಮೆಲ್ಲರ ಭಾಗ್ಯ. ತಾಯಿಯ ಆಶೀರ್ವಾದದಿಂದ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಲಿ. ಉತ್ತಮ ಮಳೆಯಾಗಿ ರೈತರು ಸಮೃದ್ಧರಾಗಲಿ, ಪ್ರತಿಯೊಬ್ಬರಿಗೂ ಆರೋಗ್ಯ, ಐಶ್ವರ್ಯ ಮತ್ತು ಒಳಿತಾಗಲಿ ಎಂದು ಪ್ರಾರ್ಥಿಸಿದ್ದೇವೆ. ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಭಕ್ತಿ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಪುಣ್ಯ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್.ಆರ್.ಕೆ. ಕುಮಾರ್, ಹರೀಶ್, ಗಣಪ, ಮಹೇಂದ್ರ, ರವಿ, ಸೂರಿ, ಅಂಬಾರಿ ಕೃಷ್ಣ, ನಂಜುಂಡಸ್ವಾಮಿ, ಮನೋಜ್, ಶಿವು, ಮಾದಪ್ಪ, ತುಂಬಸೋಗೆ ಹಾಗೂ ದೇವಸ್ಥಾನದ ಪಾರುಪತ್ತೆದಾರರಾದ ಮಹದೇವಸ್ವಾಮಿ, ದೇವಾಲಯದ ಅರ್ಚಕರಾದ ಪ್ರಸನ್ನ ಕುಮಾರ್, ಮನೋಹರ್, ನಿಂಗರಾಜು, ಸಂತೋಷ್, ದೇವಣ್ಣ, ಮಣಿ, ಶಿವಕುಮಾರ್, ನಾಗಣ್ಣ ಸೇರಿದಂತೆ ಸ್ಥಳೀಯ ಗ್ರಾಮಸ್ಥರು, ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಹಾಗೂ ಡಾ. ಚಂದ್ರಶೇಖರ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
