ಬೀದರ್: ಜಿಲ್ಲೆಯ ಐತಿಹಾಸಿಕ ಬಸವಕಲ್ಯಾಣ ನಗರದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳ ಹದೆಗೆಟ್ಟ ಸ್ಥಿತಿ ಮತ್ತೊಮ್ಮೆ ಬಹಿರಂಗಗೊಂಡಿದೆ. ನಗರದ ಮುಖ್ಯರಸ್ತೆಗಳೆಲ್ಲವೂ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಮಳೆಯಾಘಾತಕ್ಕೆ ಬಸವಕಲ್ಯಾಣದ ಮುಖ್ಯರಸ್ತೆಗಳಲ್ಲಿ ದೊಡ್ಡ ಅಳತೆಯ ಗುಂಡಿಗಳು ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದ ಮಳೆನೀರು ನಿಂತು ರಸ್ತೆಗಳು ಅಕ್ಷರಶಃ ಕೆರೆಯಂತಾಗಿ ಮಾರ್ಪಟ್ಟಿವೆ. ರಸ್ತೆಯಲ್ಲಿನ ಹೊಂಡಗಳಲ್ಲಿ ಮಳೆನೀರು ತುಂಬಿ ನಿಂತಿರುವುದನ್ನು ಕಂಡ ಸ್ಥಳೀಯ ಮಕ್ಕಳು, ಅಲ್ಲಿಯೇ ಇಳಿದು ಈಜಾಡಿ ಆಟವಾಡುತ್ತಿರುವ ದೃಶ್ಯಗಳು ಕಂಡುಬಂದವು.
ಪ್ರಮುಖ ರಸ್ತೆಗಳಲ್ಲಿ ಈ ರೀತಿ ಹೊಂಡ–ಗುಂಡಿಗಳು ನಿರ್ಮಾಣವಾಗಿ ಸರೋವರದಂತಾಗಿದ್ದರೂ, ಸಂಬಂಧಪಟ್ಟ ಆಡಳಿತ ಯಂತ್ರಂಗ ಹಾಗೂ ನಗರಸಭೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
