ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಶಾಸನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳ ಭರ್ತಿಗೆ ಎಐಸಿಸಿ (AICC) ಅಂತಿಮ ಅನುಮೋದನೆ ನೀಡಿದ್ದು, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಹೊಸ ಸಚಿವರ ಪಟ್ಟಿಯಲ್ಲಿ ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಹೆಚ್. ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಶಾಸನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳಿಗೆ ಸಂಬಂಧಿಸಿದಂತೆ, ವಿಧಾನಸಭೆಯ ಸ್ಪೀಕರ್ ಆಗಿ ಜಿ. ಎಸ್. ಪಾಟೀಲ್ ಹಾಗೂ ಉಪ ಸ್ಪೀಕರ್ ಆಗಿ ಎ. ಎಸ್. ಪೊನ್ನಣ್ಣ ಆಯ್ಕೆಯಾಗಿದ್ದರೆ, ವಿಧಾನಪರಿಷತ್ತಿನ ಸಭಾಪತಿಯಾಗಿ ಸಲೀಂ ಅಹಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಈ ನಿರ್ಧಾರದೊಂದಿಗೆ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಸರತ್ತಿಗೆ ಅಧಿಕೃತ ತೆರೆಬಿದ್ದಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
