nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    ತಿಪಟೂರು August 4, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    By Ganesh TumkuruAugust 4, 2026No Comments2 Mins Read
    tipaturu

    ತಿಪಟೂರು: ತಾಲೂಕಿನಾದ್ಯಂತ ಕುಡಿಯುವ ನೀರು ಮತ್ತು ಅಸಮರ್ಪಕ ವಿದ್ಯುತ್ ಸರಬರಾಜಿನಿಂದಾಗಿ ಜನ ಹಾಗೂ ಜಾನುವಾರುಗಳಿಗೆ ನೀರು-ಮೇವಿಗೆ ತೀವ್ರ ಅಭಾವ ಉಂಟಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಶ್ವತ್ ನಾರಾಯಣ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕೆಲಸಗಳಿಗೂ ಜನರು ಸರ್ಕಾರಿ ಕಚೇರಿಗಳಿಗೆ ಐದಾರು ಬಾರಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ ಅಳಲನ್ನು ನಮೊಂದಿಗೆ ತೋಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮನೆ ಹಾಗೂ ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಹೊನ್ನವಳ್ಳಿ ಹೋಬಳಿಯೊಂದರಲ್ಲೇ ಕಳೆದ ಒಂದು ತಿಂಗಳ ಅವಧಿಯಲ್ಲಿ ಒಂದೇ ಮನೆಯ ಮೂವರು ಮದ್ಯವ್ಯಸನಕ್ಕೆ ಬಲಿಯಾಗಿದ್ದಾರೆ. ಅಧಿಕಾರಿಗಳು ಇದನ್ನು ತಡೆಯಲು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

    ತಾಲೂಕಿನ 225 ಶಾಲೆಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ, ಹಲವು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಕೊರತೆ ಇರುವುದು ಕಂಡುಬಂದಿದೆ. ಸಂಬಂಧಪಟ್ಟ ಇಲಾಖೆ ತಕ್ಷಣವೇ ಈ ಸಮಸ್ಯೆಗಳನ್ನು ಬಗೆಹರಿಸಬೇಕು. ನಗರ ಪ್ರದೇಶದಲ್ಲಿಯೂ ನೀರಿನ ಕೊರತೆ ದಿನೇ ದಿನೇ ಹೆಚ್ಚುತ್ತಿದ್ದು, ನಗರಾಡಳಿತ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

    ತಾಲೂಕಿನಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ರಾಗಿ ಬಿತ್ತನೆ ಮಾಡಲು ಸಹ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಮೇವು ಬೆಳೆಯಲು ಅಗತ್ಯವಿರುವ ವಿದ್ಯುತ್ತನ್ನು ಬೆಸ್ಕಾಂ ಸಮರ್ಪಕವಾಗಿ ನೀಡುತ್ತಿಲ್ಲ. ತಕ್ಷಣವೇ ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸದೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

    ಗ್ರಾಮೀಣ ಪ್ರದೇಶಗಳ ದಿನಸಿ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಗ್ರಾಮದ ಅನೇಕ ಯುವಕರು ದುರಭ್ಯಾಸಕ್ಕೆ ಬಲಿಯಾಗುತ್ತಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ತಕ್ಷಣವೇ ಜಾಗೃತರಾಗಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಕರುಡಾಳು ಹರೀಶ್ ಆಗ್ರಹಿಸಿದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ

    August 3, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ತಿಪಟೂರು: ತಾಲೂಕಿನಾದ್ಯಂತ ಕುಡಿಯುವ ನೀರು ಮತ್ತು ಅಸಮರ್ಪಕ ವಿದ್ಯುತ್ ಸರಬರಾಜಿನಿಂದಾಗಿ ಜನ ಹಾಗೂ ಜಾನುವಾರುಗಳಿಗೆ ನೀರು-ಮೇವಿಗೆ ತೀವ್ರ ಅಭಾವ ಉಂಟಾಗಿದೆ.…

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.