ತುಮಕೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 560 ಭೂಮಾಪಕರ ಹುದ್ದೆಗಳಿಗೆ, ಅರ್ಜಿಹಾಕಲು ಆ.7 ಅಂತಿಮ ದಿನಾಂಕ ನಿಗದಿಪಡಿಸಿದೆ, ಕರ್ನಾಟಕ ವಿಶೇಷ ಮೀಸಲು ಪೊಲೀಸ್ ಕಾನ್ಸ್ ಟೇಬಲ್ 1455 ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಲು ಆ.10 ಅಂತಿಮ ದಿನಾಂಕವಾಗಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು, ಈ ಮೂರು ಹುದ್ದೆಗಳಿಗೆ ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ಕುವೆಂಪುನಗರ, ತುಮಕೂರು ಇವರು ಆ.6ರಂದು ಬೆಳಿಗ್ಗೆ 10:30ಗಂಟೆಗೆ ಸಂಸ್ಥೆಯ ಆವರಣದಲ್ಲಿ ಸದರಿ ಹುದ್ದೆಗಳಿಗೆ ಪೂರ್ವಭಾವಿ ಸಿದ್ಧತೆಗಾಗಿ, ಅರ್ಜಿಗಳನ್ನು ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ಪಠ್ಯಕ್ರಮ, ಲಿಖಿತ ಪರೀಕ್ಷೆ, ಅಂಕಗಳ ವಿಂಗಡನೆ, ನಿಗದಿಯಾಗಿರುವ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳನ್ನು ಉಚಿತ ಒರಿಯಂಟೇಶನ್ ಕಾರ್ಯಾಗಾರದಲ್ಲಿ ನೀಡಲಾಗುವುದು.
ಆಸಕ್ತ ಉದ್ಯೋಗಾಂಕ್ಷಿಗಳು ಹೆಸರನ್ನು ಆ.6ರೊಳಗೆ 9449146200 ಸಂಪರ್ಕಿಸಿ ನೋಂದಾಯಿಸಿಕೊಳ್ಳಲು ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ತುಮಕೂರು ಶಾಖೆಯ ಕಾರ್ಯದರ್ಶಿ ಹೆಚ್.ಎಸ್. ಹನುಮೇಗೌಡರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
