nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    ಜಿಲ್ಲಾ ಸುದ್ದಿ August 4, 2026

    ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ

    By Ganesh TumkuruAugust 4, 2026No Comments2 Mins Read
    bidar

    ಬೀದರ್: ಜಿಲ್ಲೆಯ ವಿವಿಧ ಶಾಲೆಗಳ ಅಡುಗೆ ಕೋಣೆಗಳಿಂದ ಗ್ಯಾಸ್ ಸಿಲಿಂಡರ್‌ ಗಳನ್ನು ಕಳ್ಳತನ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು ಭಾಲ್ಕಿ ಉಪ–ವಿಭಾಗದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಭಾಲ್ಕಿ ಗ್ರಾಮೀಣ, ಮೇಹಕರ ಹಾಗೂ ಖಟಕ್ ಚಿಂಚೋಳಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 09 ಸಿಲಿಂಡರ್ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

    ದಿನಾಂಕ 02-08-2026 ರಂದು ಕಳವು ಮಾಡಿದ ಸಿಲಿಂಡರ್‌ ಗಳನ್ನು ಮಹಾರಾಷ್ಟ್ರದ ಉದ್ಗೀರ್ ಕಡೆಗೆ ಕಾರಿನಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಒಯ್ಯಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಪ್ರದೀಪ್ ಗುಂಟಿ (IPS), ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ ಮತ್ತು ಭಾಲ್ಕಿ ಡಿವೈಎಸ್ಪಿ ಬಾಲಪ್ಪ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಭಾಲ್ಕಿ ಗ್ರಾಮೀಣ ವೃತ್ತದ ಸಿಪಿಐ ಹಣಮರೆಡ್ಡಿ ಹಾಗೂ ಪಿಎಸ್ ಐ ಅಶೋಕ ಪಾಟೀಲ್ ನೇತೃತ್ವದ ಪೊಲೀಸ್ ಸಿಬ್ಬಂದಿ ತಂಡ ಬೀದರ್–ಉದ್ಗೀರ್ ರಸ್ತೆಯ ಚೀಲ(ಬ) ಕ್ರಾಸ್ ಹತ್ತಿರ ಕಾರನ್ನು ತಡೆದು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದರು.

    ವಶಕ್ಕೆ ಪಡೆದ ಆರೋಪಿಗಳನ್ನು ಸುದೀರ್ಘ ವಿಚಾರಣೆಗೊಳಪಡಿಸಿದಾಗ, ಭಾಲ್ಕಿ ತಾಲೂಕಿನ 27 ಹಳ್ಳಿಗಳು, ಹುಮನಾಬಾದ್ ತಾಲೂಕಿನ 08 ಹಳ್ಳಿಗಳು ಹಾಗೂ ಬಸವಕಲ್ಯಾಣ ತಾಲೂಕಿನ 01 ಹಳ್ಳಿಯ ವಿವಿಧ ಶಾಲೆಗಳಲ್ಲಿ ರಾತ್ರಿ ವೇಳೆ ಅಡುಗೆ ಕೊಠಡಿಯ ಬೀಗ ಮುರಿದು ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಕದ್ದ ಸಿಲಿಂಡರ್‌ ಗಳನ್ನು ದಾದಗಿ ಕ್ರಾಸ್ ಬಳಿಯ ಚಹಾ ಹೋಟೆಲೊಂದರಲ್ಲಿ ಸಂಗ್ರಹಿಸಿಟ್ಟಿರುವುದಾಗಿ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ₹2,75,000/- ಮೌಲ್ಯದ 33 ಭಾರತ್, 16 ಇಂಡೇನ್ ಹಾಗೂ 06 ಹೆಚ್‌ಪಿ ಕಂಪನಿಯ ಒಟ್ಟು 55 ಸಿಲಿಂಡರ್‌ಗಳು ಮತ್ತು ₹7,00,000/- ಮೌಲ್ಯದ ಕಾರು ಪತ್ತೆಯಾಗಿದೆ.

    ಈ ಪ್ರಕರಣದಲ್ಲಿ ದಾದಗಿ ನಿವಾಸಿ ಗುರುನಾಥ ಶಿವಪುತ್ರ ತಮಸಂಗ (29), ಸಾಯಿನಗರದ ರಫಿಕ ರಜಾಕಮಿಯ್ಯಾ ಮುದ್ದೇವಾಲಯ (34), ದಾದಗಿಯ ಬಸವರಾಜ ನೀಲಕಂಠ ತಮಸಂಗ (32) ಹಾಗೂ ಸುದೀಪ ಶಿವಕುಮಾರ ಸ್ವಾಮಿ (22) ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಲೆಗಳ ಸಿಲಿಂಡರ್ ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕಳ್ಳರನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ

    August 4, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.