nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    ರಾಜ್ಯ ಸುದ್ದಿ August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    By Ganesh TumkuruAugust 4, 2026No Comments2 Mins Read
    congress

    ತುಮಕೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರನ್ನು ಹೊಂದಿರುವ ತುಮಕೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗದಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರು ಹಾಗೂ ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ,  ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್  ನೇತೃತ್ವದ ಸರ್ಕಾರದಲ್ಲಿ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಉಳಿದ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಅವಕಾಶ ನೀಡದಿರುವುದು ಪಕ್ಷದೊಳಗೆ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ.

    ಟಿ.ಬಿ.ಜಯಚಂದ್ರ ರಾಜೀನಾಮೆ ಸೂಚನೆ

    2ನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅವಕಾಶ ಕೈತಪ್ಪಿದೆ. ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ಮಾನದಂಡವಿಟ್ಟು ಕೃಪೆ ತೋರಿದ್ದಾರೋ ಗೊತ್ತಿಲ್ಲ. ಹಿರಿಯರು ಮತ್ತು ಪಕ್ವತೆ ಹೊಂದಿರುವ ಶಾಸಕರಿಗೆ ಅವಕಾಶ ನೀಡಬೇಕಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ತಮಗೆ ಅವಕಾಶ ಸಿಗದಿದ್ದಕ್ಕೆ ಸಿರಾ ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದು, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಜಯಚಂದ್ರ ಹೇಳಿದ್ದಾರೆ. ತಾವು ಮೊದಲಿನಿಂದಲೂ ಪಕ್ಷನಿಷ್ಠರಾಗಿದ್ದು, ಮತದಾರರ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜೀನಾಮೆ ಇಂಗಿತ ಹೊರಹಾಕಿದ್ದಾರೆ.

    ಕೆಎನ್ ಆರ್, ಶ್ರೀನಿವಾಸ್, ಷಡಾಕ್ಷರಿ ಬೆಂಬಲಿಗರ ನಿರಾಸೆ

    ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ನಿರಾಸೆಯಾಗಿದೆ. ಯುವ ಕೋಟಾದಡಿಯಲ್ಲಿ ಶಾಸಕ ಆರ್. ರಾಜೇಂದ್ರ ಅವರಿಗಾದರೂ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರವೂ ಸುಳ್ಳಾಗಿದೆ.

    ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಗೆದ್ದು ಕೆಎಸ್ ಆರ್‌ ಟಿಸಿ ಅಧ್ಯಕ್ಷರಾಗಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರಿಗೂ ಮಂತ್ರಿಗಿರಿ ಕೈತಪ್ಪಿದೆ. ಇನ್ನು ಹಳೆಯ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕರಾಗಿರುವ ಹಿರಿಯ ನಾಯಕ ಷಡಾಕ್ಷರಿ ಅವರು ದೆಹಲಿಗೆ ತೆರಳಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಒತ್ತಡ ಹೇರಲು ಯತ್ನಿಸಿದ್ದರು. ಆದರೆ, ಹಿರಿಯತನ ಹಾಗೂ ಪಕ್ಷನಿಷ್ಠೆಯನ್ನು ಪರಿಗಣಿಸದೆ ಅವರಿಗೂ ಸಚಿವ ಸ್ಥಾನ ನಿರಾಕರಿಸಿರುವುದು ಸಮುದಾಯ ಹಾಗೂ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ.

    ಜಿಲ್ಲೆಯ 7 ಶಾಸಕರಲ್ಲಿ ಪರಮೇಶ್ವರ್ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಿ, ಉಳಿದ ಹಿರಿಯರನ್ನು ಕಡೆಗಣಿಸಿರುವುದು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಬೆಳವಣಿಗೆಯಿಂದಾಗಿ ಮುಂದಿನ ದಿನಗಳಲ್ಲಿ ಶಾಸಕರಿಂದ ಪುನಃ ಪಕ್ಷಾಂತರಗಳು ನಡೆದರೂ ಅಚ್ಚರಿಯಿಲ್ಲ ಎಂಬ ಚರ್ಚೆ ಕೈ ಪಡೆಯೊಳಗೆ ಜೋರಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.